ಬೆಂಗಳೂರು: ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹಣ ಸಂಗ್ರಹಿಸಿ ಲಂಚ ನೀಡಿ ಎಂದು ಹೇಳಿದ್ದಾರೆಂಬ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ದಾಖಲೆ ಪುರಾವೆಗಳ ಜೊತೆಗೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕೆಲವು ಗುತ್ತಿಗೆದಾರರು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ ಅಷ್ಟೇ. ಅವರ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸಿದ್ದರಾಮಯ್ಯನವರ ಭೇಟಿ ಬಳಿಕ ಆರೋಪ ಮಾಡಿದ್ದಾರೆ. ಹಿಂದೆ ಆರೋಪ ಮಾಡಿದ ಎಲ್ಲದಕ್ಕೂ ಸರ್ಕಾರ ಕ್ರಮ ಜರುಗಿಸಿದೆ. ನಿವೃತ್ತ ನ್ಯಾಯಧೀಶರ ನೇತೃತ್ವದಲ್ಲಿ ಸ್ಕ್ರೂಟಿನಿ ಮಾಡಿದ್ದೇವೆ. ಬೇರೆ ಯಾವ ರಾಜ್ಯದಲ್ಲೂ ಇದನ್ನು ಮಾಡಿಲ್ಲ. ಏನೇ ದೂರು ಇದ್ದರೂ ಲೋಕಾಯುಕ್ತಕ್ಕೆ ನೀಡಿ ಕ್ರಮ ತೆಗೆದಯಕೊಳ್ಳುತ್ತಾರೆ. ಆಧಾರರಹಿತ ಆರೋಪಕ್ಕೆ ಹುರುಳಿಲ್ಲ ಎಂದು ಸಿಎಂ ಬೊಮ್ಮಾಯಿ‌ ಆರೋಪವನ್ನು ತಳ್ಳಿಹಾಕಿದ್ದಾರೆ.


ಇದನ್ನೂ ಓದಿ: Bengaluru Metro : ಶೀಘ್ರದಲ್ಲೇ ಮೊಬೈಲ್ ಮೂಲಕವೇ ಸಿಗಲಿದೆ ನಮ್ಮ ಮೆಟ್ರೋ ಟಿಕೆಟ್


ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಪ್ರಧಾನಿ ಮೋದಿಗೆ ಮತ್ತೊಂದು ಪತ್ರ ಬರೆಯುವುದಾಗಿ ಹೇಳಿದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಪ್ರಧಾನಿಗೆ ಪತ್ರ ಬರೆಯುವ ಅವಕಾಶ ಎಲ್ಲರಿಗೂ ಇದೆ. ಏನಾದರೂ ತೊಂದರೆ ಇದ್ದರೆ ದೂರು ಕೊಡುವ ವ್ಯವಸ್ಥೆ ಇದೆ. ಹೀಗಾಗಿ ದೂರು ನೀಡಲಿ ಎಂದು ಹೇಳಿದ್ದಾರೆ.


ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ


ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಮ್ಮೆ ಗುತ್ತಿಗೆದಾರರು ಗಂಭೀರ ಆರೋಪ ಮಾಡಿದ್ದಾರೆ. ಗುತ್ತಿಗೆದಾರರಿಂದ ಮತ್ತೆ 40% ಕಮಿಷನ್ ಆರೋಪ ಕೇಳಿಬರುತ್ತಿದೆ. ‘ಸರ್ಕಾರದ ಸಂಪೂರ್ಣ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ಇಲ್ಲಿ ಸಿಎಂ ಬೊಮ್ಮಾಯಿಯಿಂದ ಹಿಡಿದು ಸಚಿವರು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ’ ಅಂತಾ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.


ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ.. ಸರ್ಕಾರದಿಂದ ಹೊರಬಂತು ಮಹತ್ವದ ಆದೇಶ


ರಾಜ್ಯ ಸರ್ಕಾರದ ಈ ಭ್ರಷ್ಟಾಚಾರದ ಬಗ್ಗೆ ಮತ್ತೊಮ್ಮೆ ಪ್ರಧಾನಿ ಮೋದಿಗೆ ಪತ್ರ ಬರೆಯುವುದಾಗಿ ಕೆಂಪಣ್ಣ ಆಕ್ರೋಶ ಹೊರಹಾಕಿದ್ದಾರೆ. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ‘ಗುತ್ತಿಗೆದಾರರ ಕೆಲಸ ಮಂಜೂರು ಆಗಬೇಕೆಂದರೆ ಲಂಚ ಕೊಡಬೇಕು, ಇಲ್ಲದಿದ್ದರೆ ಗುತ್ತಿಗೆ ರದ್ದು ಮಾಡಲಾಗುವುದು. ಹಣ ಸಂಗ್ರಹಿಸಿ ತಂದುಕೊಡಿ ಎಂದು ಸಚಿವ ಮುನಿರತ್ನ ನೇರವಾಗಿ ಬೆದರಿಕೆ ಹಾಕುತ್ತಾರೆಂದು’ ಕೆಂಪಣ್ಣ ಆರೋಪಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.