ಬೆಂಗಳೂರು: ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ‌. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.


COMMERCIAL BREAK
SCROLL TO CONTINUE READING

ಮುಂದಿನ 9 ವರ್ಷಗಳ ಕಾಲ ನಾವೇ ಅಧಿಕಾರದಲ್ಲಿ ಇರುತ್ತೇವೆ. ನಿಮ್ಮ ಸಮಸ್ಯೆಗಳನ್ನು ನಾವೇ ಬಗೆಹರಿಸುವುದು. ನಾವೇ ಪರಿಹಾರ ನೀಡುವುದು. ಈ ವಿಚಾರ ನೆನಪಿನಲ್ಲಿ ಇಟ್ಟುಕೊಳ್ಳಿ. ಗುತ್ತಿಗೆದಾರರು ಇಲ್ಲದೇ ಸರ್ಕಾರ ನಡೆಸಲು ಸಾಧ್ಯವಿಲ್ಲ. ನಾವು ಸರ್ಕಾರ ನಡೆಸುತ್ತೇವೆ, ನೀವು ಕಾಮಗಾರಿ ನಡೆಸುತ್ತೀರ. ಈ ಎರಡೂ ದೇಶದ ಕೆಲಸಗಳು. ರಾಜ್ಯದ ಅಭಿವೃದ್ಧಿಯ ಭಾಗಗಳು ನೀವೆಲ್ಲ ಎಂದು ಹೇಳಿದರು. 


ಹಿಂದಿನ ಸರ್ಕಾರ ಸರಿಯಾದ ಯೋಜನೆ ಮಾಡದೆ ನಿಮ್ಮ ಮೇಲೆ ಹೊರೆ ಹಾಕಿದೆ. ನೀರಾವರಿ ಇಲಾಖೆಯ ಬಜೆಟ್ 16 ಸಾವಿರ ಕೋಟಿ ಇದೆ. ಆದರೆ ಕಳೆದ ಬಾರಿ 25 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿತ್ತು. ಒಟ್ಟು ನನ್ನ ಇಲಾಖೆಯಲ್ಲಿ 1 ಲಕ್ಷ 25 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿವೆ. ಹೀಗಿದ್ದಾಗ ಗುತ್ತಿಗೆದಾರರು ಕೆಲಸ ಮುಗಿಸುವುದು ಹೇಗೆ?, ಸರ್ಕಾರ ಬಿಲ್ ಪಾವತಿ ಮಾಡುವುದು ಹೇಗೆ? ಈ ಸಮಸ್ಯೆಗಳನ್ನು ಬಗೆಹರಿಸಲು ಗಮನ ಹರಿಸುತ್ತೇವೆ ಎಂದು ಹೇಳಿದರು. 


ಇದನ್ನೂ ಓದಿ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದೆ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್’ಡಿಡಿ


ಈ ಬಾರಿ ಅಭಿವೃದ್ಧಿ ಕಾರ್ಯಗಳಿಗೆ ಎಂದು 1.20 ಲಕ್ಷ ಕೋಟಿ ಹಣ ಮೀಸಲಿಟ್ಟಿದ್ದೇವೆ. 3 ಲಕ್ಷ 71 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದು,‌ ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿ ವೆಚ್ಚವಾಗಲಿದೆ. ನಿಮಗೆ ತೊಂದರೆ ಆಗದಂತೆ ಒಂದಷ್ಟು ಹಣ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು. 


ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಹಣ ಸರಿಯಾಗಿ ನೀಡದ ಪರಿಣಾಮ ಹೆಚ್ಚಿನ ತೊಂದರೆಯಾಗುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಹಣ ನೀಡುವುದಾಗಿ ಬಜೆಟ್‌ನಲ್ಲಿಯೇ ಹೇಳಿದರು. ಇದುವರೆಗೂ ಒಂದು ರೂಪಾಯಿ ಬಂದಿಲ್ಲ. ಪರಿಸ್ಥಿತಿ ಹೀಗಿರುವಾಗ ಸರ್ಕಾರ ಹೇಗೆ ನಡೆಸುವುದು? ಎಂದು ಹೇಳಿದರು. 


ದೊಡ್ಡ, ದೊಡ್ಡ ಗುತ್ತಿಗೆದಾರರು ಬೃಹತ್ ಮೊತ್ತದ‌ ಪ್ಯಾಕೇಜ್ ಯೋಜನೆಗಳನ್ನು ತೆಗೆದುಕೊಂಡು ತುಂಡು ಗುತ್ತಿಗೆಯಾಗಿ ಸಣ್ಣವರಿಗೆ ನೀಡುತ್ತಿದ್ದಾರೆ. ಈ ಮಾಫಿಯಾವನ್ನು ಪ್ರಾರಂಭ ಮಾಡಿದ್ದೇ ಅಧಿಕಾರಿಗಳು ಎಂದು ಹೇಳಿದರು. 


ಗುತ್ತಿಗೆದಾರರು ಪ್ಯಾಕೇಜ್ ಪದ್ದತಿ ರದ್ದು ಮಾಡಬೇಕು. ಬಾಕಿ ಮೊತ್ತ ಬಿಡುಗಡೆ ಮಾಡಬೇಕು. ಭ್ರಷ್ಟಾಚಾರ ಕಡಿಮೆ ಮಾಡಬೇಕು ಎನ್ನುವ ನಿಮ್ಮ ಬೇಡಿಕೆಗಳನ್ನು ಪೂರೈಸುವ ಚಿಂತನೆ ಮಾಡಲಾಗುವುದು. ಆದರೆ ಈ ಭ್ರಷ್ಟಾಚಾರದ ಭೂತ ನಿಮಗೂ ಅಂಟಿದೆ, ನಮಗೂ ಅಂಟಿದೆ. ಇಬ್ಬರೂ ಈ ಕಷ್ಟದಿಂದ ಪಾರಾಗಬೇಕಿದೆ ಎಂದು ಹೇಳಿದರು.


ಇದನ್ನೂ ಓದಿ: ನನ್ನ ಅಧಿಕಾರಾವಧಿಯಲ್ಲಿ LOCಗಾಗಿ ಯಾರಾದರೂ ನನಗೆ ಐದು ಪೈಸೆ ಲಂಚ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಸವಾಲು


ಗುತ್ತಿಗೆದಾರರ ಎಲ್ಲಾ ಬೇಡಿಕೆಗಳು ಸರ್ಕಾರದ ಗಮನದಲ್ಲಿದೆ. ನೀವು ಹಣವನ್ನು ಬಡ್ಡಿಗೆ ತಂದು, ಮೀಟರ್ ಬಡ್ಡಿ ಕಟ್ಟುತ್ತಾ, ಆಸ್ತಿಗಳನ್ನು ಅಡವಿಟ್ಟು ಕಾಮಗಾರಿಗಳನ್ನು ಮಾಡಿರುತ್ತೀರ. ನಿಮ್ಮ ಕಷ್ಟ ಸರ್ಕಾರದ ಗಮನದಲ್ಲಿದೆ ಎಂದು ಹೇಳಿದರು. 


ಎರಡು, ಮೂರು ದಿನಗಳಲ್ಲಿ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾಗುವ ಸಂಭವವಿದೆ. ಚುನಾವಣೆ ನಂತರ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡಲಾಗುವುದು. ನಮ್ಮ, ನಿಮ್ಮ ಸಂಬಂಧ ಹಾಲು ಜೇನನಂತೆ. ಹಾಲನ್ನು ಕುಡಿಯದೇ ಇರಲು,‌ ಜೇನು ಸವಿಯದೇ ಇರಲು ಸಾಧ್ಯವಿಲ್ಲ. ಒಟ್ಟಿಗೆ ಕುಳಿತು ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳೋಣ ಎಂದು ಹೇಳಿದರು. 


ಎಫ್ ಎಸ್ ಎಲ್ ವರದಿ ನಿಮ್ಮ ಬಳಿ ಬಂದಿದೆಯೇ? ಅಥವಾ ಅವರ ಬಳಿ ಬಂದಿದೆಯೇ? ವರದಿ ಬಂದಿರುವುದು ಗೃಹಸಚಿವರಿಗೆ, ನನಗೆ ಗೊತ್ತಿಲ್ಲ. ಬಿಜೆಪಿಯವರು ಏನು ಬೇಕಾದರೂ ಟ್ವೀಟ್ ಮಾಡಿಕೊಳ್ಳಲಿ ಪಾಪ ಎಂದು ವ್ಯಂಗ್ಯವಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.