ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಲ್ಲಿರುವ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಡಿ‌. ರೂಪ (D Roopa) ಈಗ ರಾಜ್ಯದ ಮುಖ್ಯ ಕಾರ್ಯದರ್ಶಿಗೆ (Chief Secretary) ಪತ್ರ ಬರೆದಿರುವ ವಿಷಯ ಬೆಳಕಿಗೆ ಬಂದಿದೆ. ಜೊತೆಗೆ ಅವರು ಬರೆದಿರುವ ಪತ್ರ ಕುತೂಹಲವನ್ನೂ ಮೂಡಿಸಿದೆ.


COMMERCIAL BREAK
SCROLL TO CONTINUE READING

ಡಿಸೆಂಬರ್ 29 ರಂದು ಡಿ. ರೂಪ ಅವರು ಅಂದಿನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ (TM Vijayabaskar) ಪತ್ರ ಬರೆದಿರುವುದಾಗಿ ತಿಳಿದುಬಂದಿದೆ. ‌ಪತ್ರದಲ್ಲಿ ತಮ್ಮ ಹಿರಿಯ ಸಹೋದ್ಯೋಗಿ ಹೇಮಂತ್ ನಿಂಬಾಳ್ಕರ್ (Hemanth Nimbalkar) ವಿರುದ್ಧ ಐಎಂಎ ಪ್ರಕರಣಕ್ಕೆ  ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.


ಐಎಂಎ (IMA) ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಬಿಐ ವರದಿ ಸಲ್ಲಿಕೆಯಾಗಿದೆ. ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್ ಗೆ ಮಾತ್ರ ಅನುಮತಿ ನೀಡಿದೆ. ಆದರೂ  ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದು ಪತ್ರದಲ್ಲಿ ಡಿ. ರೂಪಾ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: Gram Panchayat Election: ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್‌ ಸಾಧನೆ ಗಮನಾರ್ಹ- ಕುಮಾರಸ್ವಾಮಿ


ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಕಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳ ವಿರುದ್ಧ ಮೌನ ವಹಿಸಲಾಗಿದೆ. ಈ ಬಗ್ಗೆ ಆಡಳಿತ ಮತ್ತು ಸಿಬ್ಬಂದಿ (DPAR) ಇಲಾಖೆಯಿಂದ ರಾಜ್ಯ ಸರ್ಕಾರದ ಪ್ರಕರಣಕ್ಕೆ  (IMA) ಸಂಬಂಧಿಸಿದಂತೆ ಹೆಚ್ಚುವರಿ ಕಾರ್ಯದರ್ಶಿ ರಜನೀಶ್ ಗೊಯೇಲ್ ಅವರಿಗೆ ಪತ್ರ ಬರೆಯಲಾಗಿತ್ತು. ಆದರೆ ರಜನೀಶ್ ಗೊಯೇಲ್ ಕ್ರಮ ಕೈಗೊಳ್ಳಲು ತಡ ಮಾಡಿದ್ದಾರೆ ಎಂದು ಡಿ‌. ರೂಪಾ ಹೇಳಿದ್ದಾರೆ.


ಇದಲ್ಲದೆ 'ಸೇಫ್ ಸಿಟಿ ಪ್ರಾಜೆಕ್ಟ್' (Safe City Project) ಬಗ್ಗೆಯೂ ಗಂಭೀರವಾದ ದೂರುಗಳು ಬಂದಿವೆ. ಆದರೂ ಈ ಬಗ್ಗೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ ಹೆಚ್ಚುವರಿ ಕಾರ್ಯದರ್ಶಿ ರಜನೀಶ್ ಗೊಯೇಲ್ ತಪ್ಪು ವರದಿ ಕೊಟ್ಟಿದ್ದಾರೆ ಎಂದಿದ್ದಾರೆ.


ಇದನ್ನೂ ಓದಿ: ಕನ್ನಡ ಬಳಿಕ ತೆಲುಗು, ತಮಿಳಿನಲ್ಲೂ ಬರಲಿದೆ ಧ್ರುವ ಸರ್ಜಾ ‘ಪೊಗರು’


ಸೇಫ್ ಸಿಟಿ ಪ್ರಾಜೆಕ್ಟ್ ಕುರಿತು ನನ್ನ ಮೇಲೆಯೂ ಸಹ ತಪ್ಪು ಹಾಗೂ ದುರುದ್ದೇಶಪೂರಿತವಾಗಿ ಆರೋಪ ಮಾಡಲಾಯಿತು. ಈ ಬಗ್ಗೆ ನಾನು ಸ್ಪಷ್ಟೀಕರಣ ನೀಡಿದ್ದೇನೆ. ಇದೇ ರೀತಿ ಇತರರಿಂದಲೂ ಸ್ಪಷ್ಟೀಕರಣ ಪಡೆಯಬೇಕು. ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಎಂದು ಡಿ. ರೂಪಾ ಆಗ್ರಹಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.