ಬೆಂಗಳೂರು: "ಜೈಪುರದಲ್ಲಿ ನಾಳೆ ನಡೆಯಲಿರುವ ಅಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಇಂದು ಈ ಭಾಗಗಳಲ್ಲಿ ಕುಂಭದ್ರೋಣ ಮಳೆ: ಗುಡುಗು, ಬಲವಾದ ಗಾಳಿ ಸಹಿತ ಜಲಪ್ರಳಯದ ಮುನ್ನೆಚ್ಚರಿಕೆ


ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿದೆ. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬ ನಿರೀಕ್ಷೆ ಇದೆ” ಎಂದಿದ್ದಾರೆ.


“ಜೈಪುರದ ಸಭೆಗೆ ಎಲ್ಲಾ ರಾಜ್ಯಗಳ ನೀರಾವರಿ ಸಚಿವರುಗಳು ಭಾಗವಹಿಸಲಿದ್ದಾರೆ. ನಮ್ಮ ಕಾನೂನು ತಜ್ಞರ ಸಲಹೆ ಪಡೆದು ಕೇಂದ್ರ ನೀರಾವರಿ ಸಚಿವರಿಗೆ ವಾಸ್ತವಾಂಶ ಮನವರಿಕೆ ಮಾಡಿಕೊಡುತ್ತೇವೆ" ಎಂದರು.


ಕುಮಾರಸ್ವಾಮಿ ಅವರು ಸಭೆಗೆ ಬರಲು ಆಗುವುದಿಲ್ಲ ಎಂದಿದ್ದಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, "ಮಂಗಳವಾರ ರಾತ್ರಿ ಮುಖ್ಯಮಂತ್ರಿ ಹಾಗೂ ಸಚಿವರ ಜತೆ ಸಮಾಲೋಚನೆ ನಡೆಸಿ ಸಭೆ ನಡೆಸುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದೇವೆ, ಅವರದ್ದು ಏನೂ ತಪ್ಪಿಲ್ಲ, ನಾವೇ ತುರ್ತಾಗಿ ಸಭೆ ಕರೆದಿದ್ದು. ಎಲ್ಲಿದ್ದರೂ ಅವರು ಸಲಹೆ, ಸೂಚನೆಗಳನ್ನು ನೀಡಬಹುದು. ನಾವು ಸ್ವೀಕರಿಸುತ್ತೇವೆ. ನಮಗೂ ಸಹ ಅನೇಕ ಕಾರ್ಯಕ್ರಮಗಳು ಇದ್ದವು, ಮುಖ್ಯಮಂತ್ರಿಗಳು ಎರಡು ಪ್ರಮುಖ ಕಾರ್ಯಕ್ರಮಗಳನ್ನು ರದ್ದು ಮಾಡಿಕೊಂಡಿದ್ದಾರೆ" ಎಂದು ತಿಳಿಸಿದರು.


ಇದನ್ನೂ ಓದಿ: “ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲು ತಮಿಳುನಾಡು”: ಮಾಜಿ ಸಿಎಂ ಹೆಚ್’ಡಿಕೆ ಆಕ್ರೋಶ


ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ನೋಟಿಸ್ ನೀಡಿದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, "ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಶಿಸ್ತನ್ನು ನಮ್ಮ ಪಕ್ಷದಲ್ಲಿ ಮೊದಲಿನಿಂದಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಮುಂದಿನದು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟದ್ದು" ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ