ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ನಡೆಯಲಿದೆ. 


COMMERCIAL BREAK
SCROLL TO CONTINUE READING

ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಜೆಟ್, ಸಾಲಮನ್ನಾ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ನಿಗಮ ಮಂಡಳಿಗಳ ಪಾಲು, ಸಾಮಾನ್ಯ ಕನಿಷ್ಠ ಕಾರ್ಯಕ್ರಮ, ಸಚಿವ ಸಂಪುಟ ವಿಸ್ತರಣೆ, ಉಭಯ ಪಕ್ಷಗಳಲ್ಲಿನ ಗೊಂದಲಗಳು ಸೇರಿದಂತೆ ಇತರ ವಿಚರಗಲಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. 


ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಆಲಿ, ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಇತರ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.


ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಜೂನ್‌ 14 ರಂದು ಮೊದಲ ಸಮನ್ವಯ ಸಮಿತಿ ಸಭೆ ನಡೆಸಲಾಗಿತ್ತು.