Corona Second Wave: ಜಾತ್ರೆ, ಉತ್ಸವಗಳಿಗೆ ಬೀಳಲಿದೆಯೇ ಬ್ರೇಕ್!
ಬೆಂಗಳೂರು ಒಂದರಲ್ಲೇ 1,000ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಈ ಮಧ್ಯೆ ರಾಜ್ಯಾದ್ಯಂತ ಹಬ್ಬ, ಜಾತ್ರೆ, ಉತ್ಸವಗಳಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಕರೋನಾವೈರಸ್ ಎರಡನೇ ಅಲೆಯ ಅಬ್ಬರ ಜೋರಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 (Covid 19) ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರು ಒಂದರಲ್ಲೇ 1,000ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಈ ಮಧ್ಯೆ ರಾಜ್ಯಾದ್ಯಂತ ಹಬ್ಬ, ಜಾತ್ರೆ, ಉತ್ಸವಗಳಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.
ಹೌದು, ನಿನ್ನೆಯಷ್ಟೇ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾತನಾಡಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಅಥವಾ ಸೆಮಿ ಲಾಕ್‌ಡೌನ್ (Lockdown) ಜಾರಿಗೆ ತರುವ ಬಗ್ಗೆ ಸರ್ಕಾರ ನಿರ್ಧರಿಸಿಲ್ಲ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ಇದಲ್ಲದೆ ಸಚಿವ ಸಂಪುಟ ಸಭೆಯಲ್ಲೂ ಲಾಕ್‌ಡೌನ್‌ನಂತಹ ಕಠಿಣ ನಿರ್ಧಾರ ಬೇಡ. ಯಾವುದೇ ರೀತಿಯ ವ್ಯಾಪಾರ-ವಹಿವಾಟುಗಳಿಗೆ ಬ್ರೇಕ್ ಹಾಕಿ ಜನರನ್ನು ತೊಂದರೆಗೆ ಸಿಲುಕಿಸುವುದು ಬೇಡ ಎಂದು ಇಂಗಿತ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ - Cabinet Meeting: ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು? ಇಲ್ಲಿದೆ ನೋಡಿ ಮಾಹಿತಿ
ಆದರೆ ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾವೈರಸ್ ಎರಡನೇ ಅಲೆಯನ್ನು (Corona Second Wave) ನಿಯಂತ್ರಿಸಲು ಕಠಿಣ ನಿಯಮಗಳನ್ನು ಜಾರಿಗೊಳಿಸುವುದೊಂದೇ ದಾರಿ ಎಂದು ತಾಂತ್ರಿಕ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಮಾಡಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಮೊದಲ ಹಂತದಲ್ಲಿ ಜಾತ್ರೆ, ಹಬ್ಬ, ಉತ್ಸವಗಳಿಗೆ ಬ್ರೇಕ್ ಹಾಕಲು ಸೂಚಿಸಿದೆ ಎಂದು ಹೇಳಲಾಗುತ್ತಿದೆ.
ವಾಸ್ತವವಾಗಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಮೂಲಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನಸಂದಣಿ ಸೇರುವುದನ್ನು ನಿಯಂತ್ರಿಸಲು ಮುಂದಾಗಿರುವ ಸರ್ಕಾರ ಜಾತ್ರೆ, ಉತ್ಸವಗಳಲ್ಲಿ ಸ್ಥಳೀಯರಿಗಷ್ಟೇ ಅವಕಾಶ ನೀಡಬೇಕು ಎಂದು ಸೂಚಿಸಿದೆ.
ಇದನ್ನೂ ಓದಿ - Cornavirus : ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್ ಜೋನ್ ಗಳ ಸಂಖೆಯಲ್ಲಿ ಹೆಚ್ಚಳ
ಇದಲ್ಲದೆ ತಮ್ಮ ಜಿಲ್ಲೆಯ ಸ್ಥಿತಿಯನ್ನು ಗಮನಿಸಿ ಜಿಲ್ಲಾಧಿಕಾರಿಗೆಳು ಟಫ್ ರೂಲ್ಸ್ ಜಾರಿಗೆ ತರುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಈ ಮೂಲಕ ಸರ್ಕಾರ ರಾಜ್ಯದಲ್ಲಿ ಕರೋನಾ ಎರಡನೇ ಅಲೆಯ ಅಬ್ಬರವನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.