Corona Second Wave: ರಾಜ್ಯ ರಾಜಧಾನಿಯಲ್ಲಿ 6ರಿಂದ 9ರವರೆಗಿನ ತರಗತಿಗಳು ಸ್ಥಗಿತ

ರಾಜ್ಯದಲ್ಲಿ ದಿನೇ ದಿನೇ ಕರೋನಾವೈರಸ್ ಎರಡನೇ ಅಲೆಯ ಆತಂಕ ಹೆಚ್ಚಾಗುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

Written by - Yashaswini V | Last Updated : Apr 2, 2021, 07:15 AM IST
  • ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಆರರಿಂದ ಒಂಬತ್ತನೇ ತರಗತಿವರೆಗೆ ಭೌತಿಕ ತರಗತಿಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲು ನಿರ್ಧಾರ
  • ಈ ನಿರ್ಧಾರ ಸದ್ಯ ಬೆಂಗಳೂರು ನಗರ ವ್ಯಾಪ್ತಿಗೆ ಸೀಮಿತ
  • ರಾಜ್ಯದ ಉಳಿದೆಡೆ ಪ್ರಸ್ತುತ ಜಾರಿಯಲ್ಲಿರುವ ವ್ಯವಸ್ಥೆಯೇ ಮುಂದುವರೆಯಲಿದೆ
Corona Second Wave: ರಾಜ್ಯ ರಾಜಧಾನಿಯಲ್ಲಿ 6ರಿಂದ 9ರವರೆಗಿನ ತರಗತಿಗಳು ಸ್ಥಗಿತ title=
Physical Classes Suspends in Bengaluru

ಬೆಂಗಳೂರು: ರಾಜ್ಯದಲ್ಲಿ ಕರೋನಾವೈರಸ್ ಎರಡನೇ ತರಂಗದ ಅಬ್ಬರ ಹೆಚ್ಚಾಗಿದೆ. ಅದರಲ್ಲೂ ಮುಖ್ಯವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರೋನವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನಲ್ಲಿ 6 ರಿಂದ 9 ನೇ ತರಗತಿವರೆಗೆ ಆಫ್‌ಲೈನ್ ಕ್ಲಾಸ್‌ ಸ್ಥಗಿತಗೊಳಿಸುವುದಾಗಿ ಕರ್ನಾಟಕ ಸರ್ಕಾರ ಗುರುವಾರ ಪ್ರಕಟಿಸಿದೆ.

ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಆರರಿಂದ ಒಂಬತ್ತನೇ ತರಗತಿವರೆಗೆ ಭೌತಿಕ ತರಗತಿಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಈ ನಿರ್ಧಾರ ಸದ್ಯ ಬೆಂಗಳೂರು ನಗರ ವ್ಯಾಪ್ತಿಗೆ ಸೀಮಿತವಾಗಿದ್ದು ರಾಜ್ಯದ ಉಳಿದೆಡೆ ಪ್ರಸ್ತುತ ಜಾರಿಯಲ್ಲಿರುವ ವ್ಯವಸ್ಥೆಯೇ ಮುಂದುವರೆಯಲಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ (S Suresh Kumar) ಹೇಳಿಕೆಯಲ್ಲಿ ತಿಳಿಸಿದ್ದಾರೆ.  

ಇದನ್ನೂ ಓದಿ - ರಾಜ್ಯದಲ್ಲಿ ಶೇ 42 ರಷ್ಟು ಕೊರೊನಾ ಪ್ರಕರಣಗಳ ಹೆಚ್ಚಳ, 4,200 ಕ್ಕೆ ದೈನಂದಿನ ಏರಿಕೆ

ಆದಾಗ್ಯೂ, 10 ನೇ ತರಗತಿ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳು ಮುಂದುವರಿಯಲಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ರಾಜ್ಯದ ಇತರ ಭಾಗಗಳಲ್ಲಿ ಆರರಿಂದ ಒಂಬತ್ತನೇ ತರಗತಿಯ ನಿಯಮಿತ ದೈಹಿಕ ತರಗತಿಗಳು ಮುಂದುವರಿಯುತ್ತವೆ. ಆದರೆ ಮಕ್ಕಳು ಶಾಲೆಗೆ ಬರುವುದು ಕಡ್ಡಾಯವಲ್ಲ. ಆರರಿಂದ ಒಂಬತ್ತು ತರಗತಿಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ - Corona Vaccination: 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಿರಿ, ನಾಡಿನ ಜನತೆಗೆ ಸಿಎಂ ಮನವಿ

ಕರೋನಾವೈರಸ್ (Coronavirus) ತಡೆಗಟ್ಟುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ನಿಂದಾಗಿ  ರಾಜ್ಯದಲ್ಲಿ 2020-21ರ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ  ವರ್ಚುವಲ್ ತರಗತಿಗಳು ಅಥವಾ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿತ್ತು. ಪ್ರಕರಣಗಳ ಕುಸಿತವು ನಿಯಮಿತ ತರಗತಿಗಳನ್ನು ಆರಂಭಿಸಲು ಸರ್ಕಾರವನ್ನು ಪ್ರೋತ್ಸಾಹಿಸಿತು. ಆದರೆ 'ಸೆಕೆಂಡ್ ವೇವ್ ಆಫ್ ಕೊರೊನಾವೈರಸ್'ನಿಂದಾಗಿ ರಾಜ್ಯದಲ್ಲಿ ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಿವೆ. 

ಬೆಂಗಳೂರಿನಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು ಪತ್ತೆಯಾಗಿರುವ ಹಿನ್ನಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಈಗ 6 ರಿಂದ 9ನೇ ತರಗತಿವರೆಗೆ ನಿಯಮಿತ ತರಗತಿಗಳನ್ನು ಸ್ಥಗಿತಗೊಳಿಸಲು ಸರ್ಕಾರ ತೀರ್ಮಾನಿಸಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News