ಬೆಂಗಳೂರು: ರಾಷ್ಟ್ರದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.‌


COMMERCIAL BREAK
SCROLL TO CONTINUE READING

ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ.ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡ ನಿನ್ನೆಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 


ಇದನ್ನೂ ಓದಿ: ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿ ಆಗಿಲ್ಲ : ಡಿಸಿಎಂ ಮಾಹಿತಿ 


ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನ ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಗ್ನಿಜನ್ ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.


ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


ಇದನ್ನೂ ಓದಿ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.