ಬೆಂಗಳೂರು: ರಾಜ್ಯ ಸರ್ಕಾರವು ಖರೀದಿಸಿರುವ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಬೆಲೆಗೆ ಮಾರುತ್ತಿರುವ ವಿಚಾರವಾಗಿ ಹೈಕೋರ್ಟ್ ಮಧ್ಯ ಪ್ರವೇಶಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಇದನ್ನೂ ಓದಿ: ದೇಶದ 13 ಜಿಲ್ಲೆಗಳಲ್ಲಿ ವಾಸಿಸುವ ಮುಸ್ಲಿಮೇತರ ಶರಣಾರ್ಥಿಗಳಿಂದ ಭಾರತೀಯ ಪೌರತ್ವಕ್ಕೆ ಅರ್ಜಿ ಆಹ್ವಾನ
ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D K Shivakumar) ಅವರು 'ಬೆಡ್ ಹಗರಣ ಬೆಳಕಿಗೆ ಬಂತು. ಬಿಜೆಪಿ ನಾಯಕರು ಒಂದು ಸಮುದಾಯವನ್ನು ಗುರಿಯಾಗಿಸಿ ಟೀಕೆ ಮಾಡಿದ್ದರು.ಆದರೆ ಈ ಹಗರಣಕ್ಕೆ ಸಂಬಂಧಿಸಿದಂತೆ ಈಗ ಬಂಧನ ಆಗಿರುವವರು ಯಾರು? ಎಂಬುದನ್ನು ಅವರೇ ಹೇಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
They won’t let the Congress procure vaccines with MLA/MLC development funds.
Now you know why.
BJP leaders exposed earning Rs 700 ‘commission’ selling vaccines for Rs 900 a dose through private hospitals. #BJPvaccineScam#LetCongressVaccinate
— DK Shivakumar (@DKShivakumar) May 29, 2021
ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸುಮಾರು 900 ರಿಂದ 1200 ರೂ ವರಗೆ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆಡಳಿತ ಪಕ್ಷದ ಸದಸ್ಯರು ಸಹಿತ ಭಾಗಿಯಾಗಿದ್ದಾರೆ ಅದರಿಂದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಮಧ್ಯಪ್ರವೇಶಿಸಿ ದೂರು ದಾಖಲಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: "ನಮಗೆ ಈ ರೀತಿ ಅವಮಾನ ಮಾಡಬೇಡಿ"-ಪ್ರಧಾನಿ ಮೋದಿ ವಿರುದ್ಧ ದೀದಿ ಟೀಕಾ ಪ್ರಹಾರ
ಇನ್ನೂ ಮುಂದುವರೆದು ಮಾತನಾಡಿದ ಅವರು ಚಾಮರಾಜನಗರದಲ್ಲಿನ ಪ್ರಕರಣದಲ್ಲಿ ಹೈಕೋರ್ಟ್ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಿದೆ. ದೇಶದಲ್ಲಿ ನ್ಯಾಯ ಬದುಕಿದೆ ಅಂತಾಕೋರ್ಟ್ ಸಾಬೀತುಪಡಿಸಿದೆ.ಈ ಸರ್ಕಾರಕ್ಕೆ ಕಿವಿ, ಕಣ್ಣು, ಹೃದಯವಿಲ್ಲ.ಇದು ಮಾನವೀಯತೆ ಇಲ್ಲದ ಸರ್ಕಾರ ಎಂದು ಅವರು ಆಡಳಿತ ಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.