ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿನಿಯರ (Student protest) ಪ್ರತಿಭಟನೆ ಮುಂದುವರಿದಿದೆ. ಕೆಲವು ದಿನಗಳ ಹಿಂದೆ ಖಾಸಗಿ ಕಾಲೇಜು ವಿದ್ಯಾರ್ಥಿನಿಯರು ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟಿಸಿ ಸುದ್ದಿಯಾಗಿದ್ದರು. ಇದೀಗ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನ (Jyoti NIvas College) ವಿದ್ಯಾರ್ಥಿನಿಯರು ತಡರಾತ್ರಿ ಇದೇ ರೀತಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕಾಲೇಜು ಆಡಳಿತ ಮಂಡಳಿ (Protest against college administration) ವಿರುದ್ಧ ವಿದ್ಯಾರ್ಥಿನಿಯರು ಗಂಭೀರ ಆರೋಪವನ್ನೂ ಹೊರೊಸಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಕರಣ ಮುಚ್ಚಿಡುವ ಬಗ್ಗೆ ಆಕ್ರೋಶ :
ತಡರಾತ್ರಿ ಬೃಹತ್ ಪ್ರತಿಭಟನೆ ನಡೆಸಿರುವ ಜ್ಯೋತಿ ನಿವಾಸ್ ಕಾಲೇಜಿನ (Jyoti NIvas college) ವಿದ್ಯಾರ್ಥಿನಿಯರು, ಕಾಲೇಜು ಆಡಳಿತ ಮಂಡಳಿ ಕೊರೊನಾ ವಿಚಾರದಲ್ಲಿ ದೊಡ್ಡ ತಪ್ಪು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಓರ್ವ ವಿದ್ಯಾರ್ಥಿನಿಗೆ ಕೊರೊನಾ (Coronavirus) ಬಂದಿದೆ, ಆದರೂ ಈ ವಿಚಾರವನ್ನು ಮುಚ್ಚಿಟ್ಟು ಕೊರೊನಾ ಬಂದ ವಿದ್ಯಾರ್ಥಿನಿ (Student protest) ಜೊತೆಗೆ ಎಲ್ಲರಿಗೂ ಪರೀಕ್ಷೆ ಬರೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ : Electricity Bill: ಬೆಲೆ ಏರಿಕೆ ನಡುವೆ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ..!


ಕಾಲೇಜು ಪ್ರವೇಶ ದ್ವಾರದ ಎದುರು ಪ್ರತಿಭಟನೆ ನಡೆಸಿದ ಜ್ಯೋತಿ ನಿವಾಸ್ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯರು ಕೂಡಲೇ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ (exam cancel) ಆಗ್ರಹಿಸಿದ್ದಾರೆ.


ಇದನ್ನೂ ಓದಿ : Bengaluru:ಸಿಲಿಕಾನ್ ಸಿಟಿಯಲ್ಲಿ ಜೀವಂತ ಮೊಸಳೆ ಮರಿ ಮಾರಾಟಕ್ಕೆ ಯತ್ನಿಸಿದವರ ಬಂಧನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ