ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್(Omicron Variant)ಹಾವಳಿ ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಮೂಲಕ ಟಫ್ ರೂಲ್ಸ್ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಶುಕ್ರವಾರ(ಜ.6)ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಲಾಗಿದೆ.
ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್ಲೈನ್ ತರಗತಿಗಳು ನಿಲ್ಲಲಿವೆ. ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ(Weekend Curfew) ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಬಳಿಕ ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್(K Sudhakar) ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರೈತರ ಆದಾಯ ಹೆಚ್ಚಳಕ್ಕೆ ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪನೆ: ಸಿಎಂ ಬಸವರಾಜ್ ಬೊಮ್ಮಾಯಿ
ಸರ್ಕಾರದಿಂದ ಟಫ್ ರೂಲ್ಸ್ ಜಾರಿ
ಸರ್ಕಾರಿ ಕಚೇರಿಗಳು, ಮಾಲ್ಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ(Coronavirus New Guidelines)ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಅಂದರೆ 50:50 ರೀತಿ ಜನರಿಗೆ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ. ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಮದುವೆ ಸೇರಿದಂತೆ ಇನ್ನಿತರ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್(RT-PCR) ಕಡ್ಡಾಯ. ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ವೈಜ್ಞಾನಿಕ ತೀರ್ಮಾನ ತೆಗೆದುಕೊಳ್ಳಲಾಗಿದೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್(R Ashok), ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೊರೊನಾ ನಿರ್ವಹಣೆ ಸಭೆ ನಡೆಯಿತು. ನಾವು ವೈಜ್ಞಾನಿವಾಗಿ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ, ಅಕ್ಕಪಕ್ಕದ ಮಹಾರಾಷ್ಟ್ರ, ಕೇರಳ, ತಮಿಳುನಾಡುಗಳಲ್ಲಿ ತೆಗೆದುಕೊಂಡಿರುವ ತೀರ್ಮಾನಗಳನ್ನು ಪರಾಮರ್ಶಿಸಲಾಗಿದೆ. ಒಮಿಕ್ರಾನ್ ಸೋಂಕು(Corona Virus) ಕೊವಿಡ್ಗಿಂತ 5 ಪಟ್ಟು ಜಾಸ್ತಿ ಆಗುತ್ತಿದೆ ಎಂದು ತಜ್ಞರು ವರದಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಪಸ್ತುತ 3,048 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 147 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ನಮ್ಮ ರಾಜ್ಯದಲ್ಲಿ ಪಾಸಿಟಿವ್ ಪ್ರಕರಣ ಶೇ.3ಕ್ಕಿಂತ ಹೆಚ್ಚಾಗುತ್ತಿದೆ. 20 ರಿಂದ 50 ವರ್ಷದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮಿಸ್ಟರ್ ಡಿ.ಕೆ.ಶಿವಕುಮಾರ್ ಗೂಂಡಾಗಿರಿ ಬಿಡಿ: ಸಚಿವ ಅಶ್ವತ್ಥ್ ನಾರಾಯಣ ಎಚ್ಚರಿಕೆ
ಬೆಂಗಳೂರಿಗೆ ಪ್ರತ್ಯೇಕ ನಿಯಮಾವಳಿ ರೂಪಿಸಲು ನಿರ್ಧಾರ
ಕಳೆದ ಕೆಲವು ದಿಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ(CoronaVirus) ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗುತ್ತಿದೆ. 3 ರಿಂದ 6, 6 ರಿಂದ 9 ಸಾವಿರ ಕೇಸ್ ಗಳು ಆಗ್ತಿವೆ. ಮುಂದಿನ ಐದಾರು ದಿನಗಳಲ್ಲಿ 10 ಸಾವಿರ ದಾಟುವ ಅಪಾಯವಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ 10 ಸಾವಿರ ದಾಟಿದೆ ಎಂದು ಹೇಳಿದ್ದಾರೆ. ಶೇ.80ರಿಂದ 85ರಷ್ಟು ಸೋಂಕು ಮೆಟ್ರೊ ನಗರಗಳಲ್ಲಿ ಕಾಣಿಸಿಕೊಳ್ತಿದೆ. ದೇಶದೆಲ್ಲೆಡೆ ಇದೇ ವಿದ್ಯಮಾನ ವರದಿಯಾಗಿದೆ. ಅಮೆರಿಕದಲ್ಲಿಯೂ ಪ್ರಸ್ತುತ 5 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿ ನಿರ್ವಹಿಸಲು ಬೆಂಗಳೂರಿಗೇ ಪ್ರತ್ಯೇಕ ಹಾಗೂ ಇನ್ನುಳಿದ ರಾಜ್ಯಕ್ಕೆ ಮತ್ತೊಂದು ನಿಯಮಾವಳಿ ರೂಪಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.