ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕರೋನಾ (Coronavirus) ಪ್ರಕರಣಗಳು ಹೆಚ್ಚುತ್ತಿವೆ. ಕರೋನಾ ಸೋಂಕು ಹರಡದಂತೆ ತಡೆಯಲು ಸರ್ಕಾರ ಎಲ್ಲ  ಕ್ರಮಗಳನ್ನು ಕೈಗೊಳ್ಳುತ್ತಿದೆ.  ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲಾಗಿದೆ. ಈ ಮಧ್ಯೆ, ರಾಜ್ಯದಲ್ಲಿ ಲಾಕ್ ಡೌನ್ (Lock down) ನಂಥಹ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. 


COMMERCIAL BREAK
SCROLL TO CONTINUE READING

ಈಗಾಗಲೇ ಕರೋನಾ (Coronavirus) ಎರಡನೇ ಅಲೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೀವ್ರ ಮುನ್ನೆಚ್ಚರಿಕಾ ಕ್ರಮಗಳನ್ನು ಜರಗಿಸುತ್ತಿದೆ. ಆದರು ಕೆಲ ಜಿಲ್ಲೆಗಳಲ್ಲಿ ಕರೋನಾ  ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ಹೊರಗುತ್ತಿಗೆ ಆಧಾರದ ಮೇಲೆ ನೇ ಮಕಗೊಂಡಿರುವ   ವೈದ್ಯರು (Doctors) ಮತ್ತು ಸಿಬ್ಬಂದಿಗಳ ಸೇವಾವಧಿಯನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ 6 ತಿಂಗಳವರೆಗೆ ಅಂದರೆ ಸೆಪ್ಟೆಂಬರ್ ೩೦ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಟ್ವೀಟ್ (Tweet) ಮಾಡಿರುವ ಆರೋಗ್ಯ ಸಚಿವ ಡಾ. ಕೆ ಸುಧಾಕರ್ (DR. K Sudhakar) ಈ ವಿಚಾರವನ್ನು ಖಚಿತ ಪಡಿಸಿದ್ದಾರೆ. 


ಲಸಿಕೆ ಹಾಕಿಸಿಕೊಂಡು ಕರೋನಾ ವಿರುದ್ಧ ಹೋರಾಡಲು ಸಹಕರಿಸುವಂತೆ ಬಿಎಸ್ ವೈ ಮನವಿ


ಈ ಮಧ್ಯೆ,  covid-19 ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದರೆ ಒಂದು ವಾರಗಳವರೆಗೆ  ಕಾದು ನೋಡಿ ಶಾಲಾ ಕಾಲೇಜು ಮುಚ್ಚುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ಸದ್ಯಕ್ಕೆ ಶಾಲಾ ಕಾಲೇಜು ಬಂದ್ ಮಾಡುವ ಯೋಜನೆ ಇಲ್ಲ ಎಂದಿದ್ದಾರೆ.


ಇದನ್ನೂ  ಓದಿ : Covid-19 ಜಾಸ್ತಿಯಾಗದಂತೆ ಎಚ್ಚರ ವಹಿಸೋಣ: ಸಚಿವ ಎಸ್.ಟಿ. ಸೋಮಶೇಖರ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.