/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ಕೋವಿಡ್ ಲಸಿಕೆಯನ್ನು ಹೆಚ್ಚಿನ ಹಿರಿಯ ನಾಗರಿಕರು ಪಡೆಯುವಂತೆ ಮಾಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ದೊರೆಯುವಂತೆ ಮಾಡಲು ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್(Dr K Sudhakar), ಸದ್ಯಕ್ಕೆ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಹೆಚ್ಚಿನವರು ಲಸಿಕೆ ಪಡೆಯಲು ಇದನ್ನು ಪಿಎಚ್‍ಸಿ, ಸಮುದಾಯ ಆರೋಗ್ಯ ಕೇಂದ್ರಕ್ಕೂ ವಿಸ್ತರಿಸಲಾಗುವುದು. ಈ ಕುರಿತು ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.

Cabinet Minister: ಟೀಂ ಲೀಡರ್ ರಾಜೀನಾಮೆ: ಸಿಎಂ ಮನೆಗೆ ಎಂಟ್ರಿ ನೀಡಿದ ಮಿತ್ರಮಂಡಳಿ!

ಕೋವಿಡ್ ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಕೋಮಾರ್ಬಿಡಿಟಿ ಇರುವವರಿಗೆ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೆ ನೈತಿಕ ಸ್ಪೂರ್ತಿ ನೀಡುವ ಕೆಲಸವೂ ನಡೆಯುತ್ತಿದೆ. ಲಸಿಕೆ(Vaccine) ನೀಡುತ್ತಿರುವುದರಿಂದ ಬಹಳ ಪ್ರಯೋಜನವಾಗುತ್ತಿದೆ. ಲಸಿಕೆ ಪಡೆದವರಿಗೆ ಮುಂದೆ ಸೋಂಕು ಬಂದರೂ ಹೆಚ್ಚು ಸಮಸ್ಯೆ ಉಂಟಾಗುವುದಿಲ್ಲ. ಇನ್ನು ಮುಂದೆ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

Karnataka Congress: 'ಕಮಲಕ್ಕೆ ಹಾರಿ ಬಂದ 15 ಶಾಸಕರಿಗೆ ಬಿಜೆಪಿ ರಾಜಕೀಯ ಸಮಾಧಿ'

ಖಾಸಗಿ ಆರೋಗ್ಯ ಕೇಂದ್ರ(PHS)ಗಳಲ್ಲಿ ಮೂಲಸೌಕರ್ಯ ನೋಡಿಕೊಂಡು ಲಸಿಕೆ ವಿತರಣೆಗೆ ಅಲ್ಲಿಯೂ ಅವಕಾಶ ನೀಡಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ವಿತರಣೆಗೆ ಅವಕಾಶ ನೀಡಲಾಗುವುದು ಎಂದರು.

Ramesh Jarkiholi: ರಮೇಶ್‌ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Section: 
English Title: 
Coronavirus vaccine will available in all govt health care centres minister sudhakar
News Source: 
Home Title: 

PHS, ಸಮುದಾಯ ಆರೋಗ್ಯ ಕೇಂದ್ರದಲ್ಲೂ ಸಿಗಲಿದೆ 'ಕೋವಿಡ್ ಲಸಿಕೆ'!

BIG NEWS: PHS, ಸಮುದಾಯ ಆರೋಗ್ಯ ಕೇಂದ್ರದಲ್ಲೂ ಸಿಗಲಿದೆ 'ಕೋವಿಡ್ ಲಸಿಕೆ'!
Yes
Is Blog?: 
No
Tags: 
Facebook Instant Article: 
Yes
Highlights: 

ಕೋವಿಡ್ ಲಸಿಕೆಯನ್ನು ಹೆಚ್ಚಿನ ಹಿರಿಯ ನಾಗರಿಕರು ಪಡೆಯುವಂತೆ ಮಾಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ

ಸದ್ಯಕ್ಕೆ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್ ಲಸಿಕೆ ನೀಡಲಾಗುತ್ತಿದೆ.

ಹೆಚ್ಚಿನವರು ಲಸಿಕೆ ಪಡೆಯಲು ಇದನ್ನು ಪಿಎಚ್‍ಸಿ, ಸಮುದಾಯ ಆರೋಗ್ಯ ಕೇಂದ್ರಕ್ಕೂ ವಿಸ್ತರಿಸಲಾಗುವುದು.

Mobile Title: 
PHS, ಸಮುದಾಯ ಆರೋಗ್ಯ ಕೇಂದ್ರದಲ್ಲೂ ಸಿಗಲಿದೆ 'ಕೋವಿಡ್ ಲಸಿಕೆ'!
Publish Later: 
No
Publish At: 
Thursday, March 4, 2021 - 18:16
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
2
Is Breaking News: 
No