ಬಿ.ಸಿ.ಪಾಟೀಲ್ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖೆಗೆ ಕಾಂಗ್ರೆಸ್ ಆಗ್ರಹ!

ರಾಜ್ಯದ ಕೃಷಿ ಇಲಾಖೆಯಲ್ಲಿ 210 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು ಸಲ್ಲಿಸಲಾಗಿದೆ.

Written by - Puttaraj K Alur | Last Updated : Sep 8, 2021, 11:27 AM IST
  • ರಾಜ್ಯದ ಕೃಷಿ ಇಲಾಖೆಯಲ್ಲಿ 210 ಕೋಟಿ ರೂ. ಭ್ರಷ್ಟಾಚಾರ ನಡೆದಿರುವ ಆರೋಪ
  • ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯ
  • ಬಿ.ಸಿ.ಪಾಟೀಲ್ ರಾಜೀನಾಮೆ ಪೆಡೆದು ತನಿಖೆಗೆ ನಡೆಸುವಂತೆ ಸಿಎಂಗೆ ಕಾಂಗ್ರೆಸ್ ಆಗ್ರಹ
ಬಿ.ಸಿ.ಪಾಟೀಲ್ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖೆಗೆ ಕಾಂಗ್ರೆಸ್ ಆಗ್ರಹ!   title=
ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು (Photo Courtesy: @Zee News)

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್(Agriculture Minister BC Patil)ವಿರುದ್ಧ ಕೇಳಿಬಂದಿರುವ 210 ಕೋಟಿ ರೂ. ಭ್ರಷ್ಟಾಚಾರ ಆರೋಪದ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಸವಾಲು ಹಾಕಿದೆ. ಈ ಕುರಿತು ಬುಧವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿ.ಸಿ.ಪಾಟೀಲ್ ವಿರುದ್ಧ ತನಿಖೆ ನಡೆಸುತ್ತೀರಾ?’ ಎಂದು ಪ್ರಶ್ನಿಸಿದೆ.

‘ಈ ಹಿಂದೆ ಕೃಷಿ ಸಚಿವ ಬಿ.ಸಿ.ಪಾಟೀಲ್(BC Patil) ವಿರುದ್ಧ ಅಧಿಕಾರಿಗಳಿಂದ ಹಫ್ತಾ ವಸೂಲಿಯ ಆರೋಪ ಬಂದಿತ್ತು. ಈಗ ಕೃಷಿ ಯಂತ್ರೋಪಕರಣ ಖರೀದಿಯ 210 ಕೋಟಿ ರೂ. ಕಿಕ್ ಬ್ಯಾಕ್ ಪಡೆದ ಬಗ್ಗೆ ಎಸಿಬಿ(ACB)ಗೆ ದೂರು ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ಅವರ ರಾಜೀನಾಮೆ ಪಡೆದು ತನಿಖೆ ನಡೆಸುವರೇ? ಅಥವಾ ಭ್ರಷ್ಟಾಚಾರಕ್ಕೆ ತಮ್ಮ ಮೌನ ಸಮ್ಮತಿ ತೋರುವರೆ?’ ಅಂತಾ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: Deadly Virus: ನಿಫಾ ವೈರಸ್ ವಕ್ಕರಿಸಿದರೆ ಪ್ರಾಣಕ್ಕೆ ಕುತ್ತು ಗ್ಯಾರಂಟಿ..!

ತನ್ನ ಮೊತ್ತೊಂದು ಟ್ವೀಟ್ ನಲ್ಲಿ ‘ರಾಜ್ಯದಲ್ಲಿ ಹಲವು ಸೋಂಕುಗಳು ತಾಂಡವವಾಡುತ್ತಿವೆ, ಆದರೆ ಬಿಜೆಪಿ(BJP)ಗೆ ಭ್ರಷ್ಟಾಚಾರದ ಸೋಂಕು ತಗುಲಿದೆ. ಈ #ಸೋಂಕಿತಸರ್ಕಾರದಿಂದ ರಾಜ್ಯ ನಲುಗುತ್ತಿದೆ. ಭ್ರಷ್ಟಾಚಾರವನ್ನೇ ಹಾಸಿ ಹೊದ್ದಿರುವ ಬಿಜೆಪಿಯಿಂದ ರಾಜ್ಯದ ಅಭಿವೃದ್ಧಿ ಕನಸು ಮಾತ್ರ. ರೈತರ ಸಂಕಷ್ಟಕ್ಕೆ ನೆರವಿಗೆ ನಿಲ್ಲಬೇಕಾದ ಹೊತ್ತಿನಲ್ಲಿ ರೈತರ ಹೆಸರಲ್ಲಿ ಲೂಟಿಗೆ ಇಳಿದಿದೆ ಬಿಜೆಪಿ’ ಎಂದು ಕಾಂಗ್ರೆಸ್ ಕುಟುಕಿದೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು

ರಾಜ್ಯದ ಕೃಷಿ ಇಲಾಖೆಯಲ್ಲಿ 210 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ್(BC Patil) ವಿರುದ್ಧ ಎಸಿಎಫ್ ಕರ್ನಾಟಕ ಸಂಘಟನೆಯ ಕೃಷ್ಣಮೂರ್ತಿ ಎಂಬುವರು ಎಸಿಬಿಗೆ ದೂರು ಸಲ್ಲಿಸಿದ್ದಾರೆ. ಸಚಿವ ರೈತರಿಗೆ ನೀಡುವ ಯಂತ್ರಗಳ ಖರೀದಿ ವೇಳೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ದಾಖಲೆಗಳ ಸಮೇತ ಬಿ.ಸಿ.ಪಾಟೀಲ್ ಮತ್ತು ಕೃಷಿ ಇಲಾಖೆ ಹೆಚ್ಚುವರಿ ನಿರ್ದೇಶಕ ದಿವಾಕರ್ ವಿರುದ್ಧ ಕೃಷ್ಣಮೂರ್ತಿ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.  

ಇದನ್ನೂ ಓದಿ: ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದೆ: ಸಿದ್ದರಾಮಯ್ಯ ಆರೋಪ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News