ಬೆಂಗಳೂರು: ಕರ್ನಾಟಕ ಸಾರಿಗೆ ನಿಗಮಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಹಾಗೂ ಐವರು ಐಎಎಸ್‌ ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದೆ. 


COMMERCIAL BREAK
SCROLL TO CONTINUE READING

ಬಿಜೆಪಿ ವಕ್ತಾರ ಎನ್‌.ಆರ್. ರಮೇಶ್ ಅವರು ಈ ಸಂಬಂಧ ದೂರು ಸಲ್ಲಿಸಿದ್ದು, ಹೆಚ್.ಎಂ. ರೇವಣ್ಣ ಅವರು ಸಚಿವರಾಗಿದ್ದ ಆರು ತಿಂಗಳ ಅವಧಿಯಲ್ಲಿ ಸಾರಿಗೆ ನಿಗಮಗಳಲ್ಲಿ ಬರೊಬ್ಬರಿ 1600 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಬಸ್ಗಳ ಖರೀದಿ ಹಾಗೂ ನಿರ್ವಹಣೆಯಲ್ಲಿ 1600ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ರಮೇಶ್‌, ಈ ಸಂಬಂಧ ಎಸಿಬಿಗೆ ದಾಖಲೆಗಳನ್ನೂ ಸಲ್ಲಿಸಿ ತಪ್ಪಿತಸ್ತರ ವಿರುದ್ಧ ಕಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.