ಬೆಂಗಳೂರು: ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ.ನಿಷ್ಠೆ, ಪ್ರಾಮಾಣಿಕತೆಗೆ ಮಾತ್ರ ಪ್ರೋತ್ಸಾಹ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ.ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.


COMMERCIAL BREAK
SCROLL TO CONTINUE READING

ವಿಕಾಸಸೌಧದಲ್ಲಿ ಇಂದು ಜಲ ಸಂಪನ್ಮೂಲ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು. ರಾಜ್ಯದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆರ್ಥಿಕ ಕ್ರೋಢೀಕರಣ ಮಾಡಿ ಆದಷ್ಟು ಬೇಗನೆ ಮುಗಿಸುವಂತೆ ಸೂಚಿಸುದರು. ಈ ಹಿಂದೆ ನಡೆದಿರುವ ಕಾಮಗಾರಿಗಳಲ್ಲಿ ನಡೆದಿರಬಹುದಾದ ಭ್ರಷ್ಟಾಚಾರ, ಲೋಪದೋಷಗಳನ್ನು ಪತ್ತೆ ಮಾಡಲು ಪ್ರತ್ಯೇಕ ಸಲಹಾ ಸಮಿತಿ ರಚಿಸಲಾಗುತ್ತಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜೀ ಮಾಡದೆ ನೀರಾವರಿ ಯೋಜನೆಗಳನ್ನು ಮುಗಿಸುವಂತೆ ಸೂಚಿಸಿದ್ದಾರೆ. ಶಿಸ್ತು ಮತ್ತು ಪಾರದರ್ಶಕತೆಗೆ ಇಲಾಖೆಯಲ್ಲಿ ಪ್ರಥಮ ಆದ್ಯತೆ ನೀಡಲಾಗುತ್ತಿದೆ. ಪ್ರಮುಖವಾಗಿ ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ಕೊಡಬೇಕಿದೆ. ಇದಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಗಳನ್ನು ರೂಪಿಸಬೇಕಿದೆ. ರಾಜ್ಯ ಸರ್ಕಾರದ ಮೇಲೆ ಜನ ಇಟ್ಟಿರುವ ವಿಶ್ವಾಸವನ್ನು ಉಳಿಸಲು ಅವಿರತವಾಗಿ ಪ್ರಯತ್ನಿಸಬೇಕು ಎಂದು ತಿಳಿಸಿದರು.


ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ.ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಬೇಕು.ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ.ಜಲವಿವಾದ ಪರಿಹಾರ, ಬಾಕಿ ಯೋಜನೆಗಳ ಪೂರ್ಣ, ನೀರಾವರಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಣ, ಕೇಂದ್ರದಿಂದ ಅನುದಾನ ತರುವುದು, ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು.ನೀರಾವರಿ ಯೋಜನೆಗಳಿಗೆ 5 ವರ್ಷದಲ್ಲಿ 2 ಲಕ್ಷ ಕೋಟಿ ರು ವಿನಿಯೋಗಿಸುತ್ತೇವೆ ಎಂದು ಮಾತು ಕೊಟ್ಟಿದ್ದೇವೆ.ಸರಕಾರ, ಸಂಸ್ಥೆಗಳು, ಕೇಂದ್ರದ ಅನುದಾನದ ಮೂಲಕ ಸಂಪನ್ಮೂಲ ಒಟ್ಟುಗೂಡಿಸಬೇಕು ಎಂದು ಅವರು ಹೇಳಿದರು.


ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಚೆನ್ನೈ ಸೂಪರ್ ಕಿಂಗ್ಸ್


ಬರೀ ಎಲ್ಒಸಿ, ಟೆಂಡರ್, ಗುತ್ತಿಗೆ ಹಂಚಿಕೆ, ಬಿಲ್ ಮಾಡೋ ಕೆಲಸಕ್ಕೆ ನಿಮ್ಮ ಶ್ರಮ ವಿನಿಯೋಗ ಆಗಬಾರದು. ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ. ನಿಷ್ಠೆ, ಪ್ರಾಮಾಣಿಕತೆಗೆ ಮಾತ್ರ ಪ್ರೋತ್ಸಾಹ.ಜಾತಿಯತೆ ಬೇಡ. ಮಾನವೀಯತೆ ಇರಲಿ ಎಂದು ಅವರು ಕಿವಿ ಮಾತು ಹೇಳಿದರು.


ನನಗೆ ಯಾವುದೇ ದ್ವೇಷ ಇಲ್ಲ. ಕೆಲಸ ಆಗಬೇಕು ಅಷ್ಟೇ.ನೀವು ಸರಕಾರಕ್ಕೆ ನಿಷ್ಠಾರಾಗಿರಬೇಕೆ ಹೊರತು ನಿಮಗೆ ಪೋಸ್ಟಿಂಗ್ ಕೊಟ್ಟವರಿಗಲ್ಲ.ಅಂತವರನ್ನು ಸಹಿಸೋದಿಲ್ಲ.ನನಗೂ 33 ವರ್ಷ ಅನುಭವ ಇದೆ. ನಿಮ್ಮ ಕೈಯಲ್ಲಿ ಮಾಡಬಾರದ್ದು ಮಾಡಿಸಲ್ಲ. ದಾರಿ ತಪ್ಪಬೇಡಿ. ಎಚ್ಚರಿಕೆಯಿಂದ ಕೆಲಸ ಮಾಡಿ. ಬದಲಾವಣೆ ತನ್ನಿ ಎಂದು ತಿಳಿ ಹೇಳಿದರು.


ಡೆಲ್ಲಿಯಿಂದ ಯೋಜನೆಗಳನ್ನು ತರಬೇಕು.ನೆರೆಯ ತಮಿಳುನಾಡು, ಆಂಧ್ರ, ಮಹಾರಾಷ್ಟ್ರಕ್ಕೆ ಎಷ್ಟು ಯೋಜನೆಗಳು ಬಂದಿವೆ, ನಮ್ಮ ರಾಜ್ಯಕ್ಕೆ ಎಷ್ಟು ಬಂದಿವೆ ಎಂದು ನೀವೇ ಹೋಲಿಕೆ ಮಾಡಿಕೊಳ್ಳಿ. ನೀವು ಎಷ್ಟು ಚೆನ್ನಾಗಿ ಕೆಲಸ ಮಾಡಿದ್ದೀರಿ ಎಂದು ಗೊತ್ತಾಗುತ್ತದೆ. ಕರ್ನಾಟಕಕ್ಕೆ ಬಹಳ ಅನ್ಯಾಯವಾಗಿದೆ.ನಾವು ಕರ್ನಾಟಕದ ಎಂಪಿಗಳ ಜತೆ ಸಭೆ ಮಾಡಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋಣ.ಪ್ರಧಾನಿಗಳು, ಕೇಂದ್ರದ ಜಲ ಸಂಪನ್ಮೂಲ ಸಚಿವರು ಸೇರಿದಂತೆ ಅಗತ್ಯ ಇರುವ ಎಲ್ಲರನ್ನೂ ಭೇಟಿ ಮಾಡೋಣ ಎಂದು ಹೇಳಿದರು.


ರಸ್ತೆ ದಾಟಿ ದಾಂಡೇಲಿ ಅರಣ್ಯದತ್ತ ಸಾಗಿದ ಆನೆಗಳ ಹಿಂಡು


ನೀವು ಯಾವುದೇ ಯೋಜನೆ ಮಾಡಿದರೂ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ.ಪ್ರತಿ ಹನಿ ನೀರು ರೈತರ, ಜನರ ಹಿತಕ್ಕೆ ಬಳಕೆ ಆಗಬೇಕು. ಪೋಲಾಗಬಾರದು.ಎಲ್ಲೆಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬಹುದು ಎಂಬುದರ ಬಗ್ಗೆ ತ್ವರಿತಗತಿಯಲ್ಲಿ ನೀಲನಕ್ಷೆ ತಯಾರು ಮಾಡಿ.ಕೆಆರ್ ಎಸ್, ಮಂಚನಬೆಲೆ, ತಿಪ್ಪಗೊಂಡನಹಳ್ಳಿ, ಹೇಮಾವತಿ ಜಲಾಶಯ ಸೇರಿದಂತೆ ಈಗಾಗಲೇ ಸಿದ್ದವಾಗಿರುವ ಉದ್ಯಾನವನ, ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ತುರ್ತು ಕ್ರಮ ತೆಗೆದುಕೊಳ್ಳಿ ಎಂದು ಅವರು ಆದೇಶಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ