SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ: ವಿದ್ಯಾರ್ಥಿಗಳಿಂದಲೇ ವಸೂಲಿಗೆ ರಾಜ್ಯ ಸರಕಾರ ಆದೇಶ-ಎಚ್ಡಿಕೆ ಕಿಡಿ

ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Manjunath N | Last Updated : Feb 3, 2024, 03:39 PM IST
  • ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ
  • ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು
  • ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ
SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ: ವಿದ್ಯಾರ್ಥಿಗಳಿಂದಲೇ ವಸೂಲಿಗೆ ರಾಜ್ಯ ಸರಕಾರ ಆದೇಶ-ಎಚ್ಡಿಕೆ ಕಿಡಿ title=

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರವನ್ನು ಗತಿಗೆಟ್ಟ ಸರಕಾರ ಎಂದು ಕಟುವಾಗಿ ಟೀಕೆ ಮಾಡಿರುವ ಅವರು; ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಅಲ್ಲದೆ, ಸರಕಾರದ ಆದೇಶದ ಪ್ರತಿಯನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Wi-Fi Router: ರಾತ್ರಿ ಮಲಗುವ ಮುನ್ನ Wi-Fi ರೂಟರ್ ಆಫ್ ಮಾಡಲ್ವಾ? ಇದೆಷ್ಟು ಡೇಂಜರಸ್ ಗೊತ್ತಾ?

ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಅವರು ಕಿಡಿಕಾರಿದ್ದಾರೆ.

ಅಕ್ರಮ ಸುಲಿಗೆಯಲ್ಲಿ 'ಸಿದ್ದಹಸ್ತ'ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಅವರು ದೂರಿದ್ದಾರೆ.

ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೂ Voter ID Card Correction  ಮಾಡಿಸಬೇಕೆ ? ಇಲ್ಲಿದೆ  ಆನ್‌ಲೈನ್ ಪ್ರಕ್ರಿಯೆಯ ಹಂತ ಹಂತದ ವಿವರ 

ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿರುವ ಅವರು; ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News