ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನವಾಗಿದ್ದು, ಬಿಜೆಪಿ ಮತ್ತು ಜೆಡಿಎಸ್‌ ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿವೆ. ಕಳೆದ ದಿನ ಕಾಂಗ್ರೆಸ್‌ ತಮಗೆ ಲಭಿಸಿರುವ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿತ್ತು. 


COMMERCIAL BREAK
SCROLL TO CONTINUE READING

ಇದನ್ನು ಓದಿ; ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಅಭಿಷೇಕಕ್ಕೆ ಅನುಮತಿ ಕೋರಿ ಅರ್ಜಿ, ಜುಲೈ 1ಕ್ಕೆ ವಿಚಾರಣೆ


ಪರಿಷತ್ತಿನ ಏಳು ಸ್ಥಾನಗಳ ಪೈಕಿ ಕಾಂಗ್ರೆಸ್‌ಗೆ ಎರಡು ಸ್ಥಾನಗಳು ಸಿಗಲಿವೆ. ಆ ಎರಡು ಸ್ಥಾನಗಳಲ್ಲಿ ಒಂದನ್ನು ಹಿಂದುಳಿದ ವರ್ಗ ಮತ್ತು ಇನ್ನೊಂದನ್ನು ಮುಸ್ಲಿಂ ಅಥವಾ ಕ್ರೈಸ್ತ ಸಮುದಾಯಕ್ಕೆ ಕೊಡಲು ಸಿದ್ದರಾಮಯ್ಯ ಹೈಕಮಾಂಡ್‌ಗೆ ಮನವಿ ಮಾಡಿದ್ದರು ಎನ್ನಲಾಗಿತ್ತು. ಆದರೆ ಹಿರಿಯ ನಾಯಕರು ಸೂಚಿಸಿದ್ದ ಹೆಸರುಗಳಿಗೆ ಮಣೆ ಹಾಕದ ಕಾಂಗ್ರೆಸ್‌ ಹೈಕಮಾಂಡ್‌ ಹೊಸ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ. ಕೆ. ಅಬ್ದುಲ್ ಜಬ್ಬಾರ್ ಮತ್ತು ಎಂ. ನಾಗರಾಜ್ ಯಾದವ್ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಘೋಷಣೆ ಮಾಡಲಾಗಿದೆ.


ಇದೀಗ ಇದೇ ಹಾದಿ ತುಳಿದಿರುವ ಬಿಜೆಪಿ, ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ. ಈ ಹಿಂದೆ ಬಿ.ಎಸ್‌ ಯಡಿಯೂರಪ್ಪ ತಮ್ಮ ಮಗ ಬಿ.ವೈ ವಿಜಯೇಂದ್ರಗೆ ಟಿಕೆಟ್‌ ನೀಡುವಂತೆ ಲಾಬಿ ಮಾಡಿದ್ದರು ಎನ್ನಲಾಗಿತ್ತು. ಆದರೆ ಇದೀಗ ಹಿರಿಯರ ಮಾತಿಗೆ ಸೊಪ್ಪು ಹಾಕದ ಬಿಜೆಪಿ ಹೈಕಮಾಂಡ್‌, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಕೇಶವಪ್ರಸಾದ್, ಲಕ್ಷ್ಮಣ ಸವದಿಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದೆ. ಈ ಬೆಳವಣಿಗೆ ಹಲವರನ್ನು ಸಂತೋಷದಿಂದ ಸ್ವಾಗತಿಸಿದ್ದಾರೆ. ಇನ್ನು ಪಶ್ಚಿಮ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಹೆಸರು ಫೈನಲ್‌ ಮಾಡಲಾಗಿದೆ. 


ಇನ್ನು ಜೆಡಿಎಸ್‌ನಿಂದ ಮಾಜಿ ಪರಿಷತ್‌ ಸದಸ್ಯ ಟಿ.ಎ ಶರವಣಗೆ ಟಿಕೆಟ್‌ ಕನ್ಫರ್ಮ್‌ ಮಾಡಲಾಗಿದೆ. ಕೊನೆ ಹಂತದಲ್ಲಿ ಶರವಣಗೆ ಜೆಡಿಎಸ್ ಟಿಕೆಟ್‌ ನೀಡಿದ್ದು, ಇಂದು ಬೆಳಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. 


ಇದನ್ನು ಓದಿ: ಈ ದಿಕ್ಕಿಗೆ ಮುಖಮಾಡಿ ಆಹಾರ ಸೇವಿಸುವುದು ಅತ್ಯಂತ ಶ್ರೇಯಸ್ಕರ! ಒಲಿದು ಬರುವುದು ಧನ ಸಂಪತ್ತು 


ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ ತಮ್ಮ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.