ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ಚುನಾವಣೆಯ (Council result) ಮತ ಎಣಿಕೆ ನಡೆ ಯುತ್ತಿದೆ. ಕಾರ್ಯ ಆರಂಭವಾಗಿದೆ. ಈಗಾಗಲೇ ಬಿಜೆಪಿ (BJP), ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ತಲಾ ಒಂದೊಂದು ಸ್ಥಾನದಲ್ಲಿ ಗೆಲುವಿನ ನಗೆ ಬೀರಿದೆ. ಕೊಡಗಿನಲ್ಲಿ ಬಿಜೆಪಿ ಆಭ್ಯರ್ಥಿ ಸುಜಾ ಕುಶಾಲಪ್ಪ (Suja Kushalappa) ಗೆಲುವು ಸಾಧಿಸಿದ್ದಾರೆ. ಹಾಸನದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ (Suraj Revanna) ಕೂಡಾ ಗೆಲುವಿನ ನಗೆ ಬೀರಿದ್ದಾರೆ. ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ.
ಒಟ್ಟು 25 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 90 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಬಿಜೆಪಿ, ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಮೂರೂ ಪಕ್ಷಗಳಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಮೂರೂ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ಕಾರ್ಯ ಕೈಗೊಂಡಿದ್ದರು.
BJP candidate Suja Kushalappa won by a lead of 102 votes against Congress candidate Mantar Gowda.#Kodagu #MLCElections @XpressBengaluru pic.twitter.com/tG8EXMhPj8
— Prajna G R (@prajna_gr) December 14, 2021
ಇದನ್ನೂ ಓದಿ : ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ 2.5 ಲಕ್ಷ ಕೋಟಿ ರೂ. ನಷ್ಟ: ಸಿದ್ದರಾಮಯ್ಯ
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮತ ಎಣಿಕೆಗೆ ಆರಂಭವಾಗಿದೆ. ಇನ್ನುಳಿದಂತೆ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲಾ ಕೇಂದ್ರಗಳಲ್ಲೂ ಕೌಂಟಿಂಗ್ ಶುರುವಾಗಿದೆ. ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ, ಕೊಡಗು, ಮೈಸೂರಿನ ಮತ ಎಣಿಕೆ ಕೇಂದ್ರಗಳಲ್ಲೂ ಕೌಂಟಿಂಗ್ ನಡೆಯುತ್ತಿದೆ.
ಮತ ಎಣಿಕೆ ಕೇಂದ್ರಕ್ಕೆ ಆಗಮಿಸುವವರಿಗೆ ಗುರುತಿನ ಚೀಟಿ ಕಡ್ಡಾಯವಾಗಿದೆ. ಕೋವಿಡ್ ನಿಯಮ (Covid guidelines) ಪಾಲನೆ ಮಾಡಬೇಕಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಾಗೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ : Success Story: ಆಡುವ ವಯಸ್ಸಿನಲ್ಲಿಯೇ ಬಾಲಕಿಯ ಬೆಟ್ಟದಷ್ಟು ಸಾಧನೆ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.