ಏಕ ಬಳಕೆಯ ಡಯಾಲಿಸಿಸ್ ಆರೋಗ್ಯ ಸೇವೆ ಆರಂಭಕ್ಕೆ ಕ್ಷಣಗಣನೆ : ನಾಳೆಯಿಂದ ಸೋಂಕು ರಹಿತ ಡಯಾಲಿಸಿಸ್ ಸೇವೆ ಆರಂಭ

ನಾಳೆಯಿಂದ ಏಕ ಬಳಕೆಯ ಡಯಾಲಿಸಿಸ್ ಆರೋಗ್ಯ ಸೇವೆ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಸಂಜೆ 5 ಗಂಟೆಗೆ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಸೇವೆಗೆ ಚಾಲನೆ ನೀಡಲಿದ್ದಾರೆ.  

Written by - Ranjitha R K | Last Updated : Jan 26, 2024, 05:49 PM IST
  • ಡಯಾಲಿಸಿಸ್ ಸದೃಢಗೊಳಿಸುತ್ತ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ
  • ರಾಜ್ಯಾದ್ಯಂತ 800 ಏಕ ಬಳಕೆಯ ಡಯಾಲೈಸರ್ ಗಳ ಕಾರ್ಯಾರಂಭಕ್ಕೆ ಕ್ಷಣಗಣನೆ
  • ನಾಳೆ ಸಿಎಂ ಸಿದ್ದರಾಮಯ್ಯ ಅವರಿಂದ ಹೊಸ ಡಯಾಲಿಸಿಸ್ ಸೇವೆಗೆ ಚಾಲನೆ
 ಏಕ ಬಳಕೆಯ ಡಯಾಲಿಸಿಸ್ ಆರೋಗ್ಯ ಸೇವೆ ಆರಂಭಕ್ಕೆ ಕ್ಷಣಗಣನೆ  : ನಾಳೆಯಿಂದ  ಸೋಂಕು ರಹಿತ ಡಯಾಲಿಸಿಸ್ ಸೇವೆ ಆರಂಭ  title=

ಬೆಂಗಳೂರು : ಉಚಿತವಾಗಿ ಉತ್ತಮ ಡಯಾಲಿಸಿಸ್ ಸೇವೆ ಎದುರು ನೋಡುತ್ತಿದ್ದ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ಜನರಿಗೆ ಸಂತಸದ ಸುದ್ದಿ. ಸೋಂಕು ರಹಿತ ಡಯಾಲಿಸಿಸ್ ಸೇವೆ ಆರಂಭಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಡಯಾಲಿಸಿಸ್ ಮಾಡಿಸಿಕೊಳ್ಳುವವರಿಗೆ ಇನ್ಮುಂದೆ ಏಕ ಬಳಕೆಯ ಡಯಾಲೈಸರ್ ಆರೈಕೆ ಲಭ್ಯವಾಗಲಿದೆ. 

ಇದೀಗ ಹೊಸ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಬಹುತೇಕ ಅಂತಿಮ ಘಟ್ಟಕ್ಕೆ ತಲುಪಿದ್ದು, ನಾಳೆಯಿಂದ ಏಕ ಬಳಕೆಯ ಡಯಾಲಿಸಿಸ್ ಆರೋಗ್ಯ ಸೇವೆ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಸಂಜೆ 5 ಗಂಟೆಗೆ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಸೇವೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಕೆ.ಸಿ‌ಜನರಲ್ ಆಸ್ಪತ್ರೆಯೊಂದರಲ್ಲೇ 20 ಹೊಸ ಏಕ ಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲಾಗಿದ್ದು, ಪ್ರತಿ ನಿತ್ಯ 72 ರೋಗಿಗಳಿಗೆ ಡಯಾಲಿಸಿಸ್ ಸೇವೆ ಒದಗಿಸುವ ಸಾಮರ್ಥ್ಯ ಕಲ್ಪಿಸಲಾಗಿದೆ. 

ಇದನ್ನೂ ಓದಿ : "ರಾಯಣ್ಣ ಕುರುಬ ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು"

ರಾಜ್ಯದಲ್ಲಿದ್ದ 171 ಡಯಾಲಿಸಿಸ್ ಕೇಂದ್ರಗಳನ್ನ 219 ಕ್ಕೆ ಹೆಚ್ಚಿಸಲಾಗಿದ್ದು, ಹೊಸದಾಗಿ 48 ತಾಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನ ಆರಂಭಿಸಲಾಗಿದೆ. 219 ಕೇಂದ್ರಗಳಲ್ಲಿ ಒಟ್ಟು 800 ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ವಿಭಾಗದ 57 ಡಯಾಲಿಸಿಸ್ ಕೇಂದ್ರಗಳಲ್ಲಿ 250 ಯಂತ್ರಗಳು, ಮೈಸೂರು ವಿಭಾಗದ 55 ಕೇಂದ್ರಗಳಲ್ಲಿ 222 ಯಂತ್ರಗಳು, ಬೆಳಗಾವಿ ವಿಭಾಗದ 62 ಕೇಂದ್ರಗಳಲ್ಲಿ 201 ಯಂತ್ರಗಳು, ಕಲಬುರಗಿ ವಿಭಾಗದ 45 ಕೇಂದ್ರಗಳಲ್ಲಿ 127 ಯಂತ್ರಗಳು ಸೇರಿದಂತೆ ಒಟ್ಟು 800 ಏಕಬಳಕೆಯ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ನಾಳೆಯಿಂದ 475 ಏಕಬಳಕೆಯ ಡಯಾಲೈಸರ್ ಗಳು ಕಾರ್ಯ ಆರಂಭಿಸಲಿದ್ದು, ರೋಗಿಗಳಿಗೆ ಸೊಂಕು ರಹಿತ ಡಯಾಲಿಸಿಸ್ ಸೇವೆ ಲಭ್ಯವಾಗಲಿದೆ. ಉಳಿದ ಕೇಂದ್ರಗಳಲ್ಲೂ ಒಂದು ತಿಂಗಳೊಳಗೆ ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳ ಸೇವೆ ಆರಂಭವಾಗಲಿದೆ.  

ಪ್ರತಿಯೊಂದು ಡಯಾಲಿಸಿಸ್ ಸೈಕಲ್ ಗೆ 1573 ರೂ ಗಳು ವೆಚ್ಚವಾಗಲಿದ್ದು, ಸರ್ಕಾರವೇ ವೆಚ್ಚವನ್ನ ಭರಿಸಿ ರೋಗಿಗಳಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲಿದೆ. 800 ಡಯಾಲಿಸಿಸ್ ಯಂತ್ರಗಳಿಂದ ವಾರ್ಷಿಕ 7.20 ಲಕ್ಷ ಡಯಾಲಿಸಿಸ್ ಸೇವೆಗಳನ್ನ ಒದಗಿಸಲು ಸಾಮರ್ಥ್ಯ ಕಲ್ಪಿಸಲಾಗಿದ್ದು, ಸೊಂಕು ರಹಿತ ಡಯಾಲಿಸಿಸ್ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಇದನ್ನೂ ಓದಿ ಪರೇಡ್ ವೇಳೆ ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯ ಬಳಿ ಏಕಾಏಕಿ ನುಗ್ಗಿದ ವ್ಯಕ್ತಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News