ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ ಬಂಡೀಪುರ ಭೇಟಿಗೆ ದಿನಗಣನೆ ಆರಂಭವಾಗಿದ್ದು ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಕಲ ತಯಾರಿ ನಡೆಸುತ್ತಿದೆ. ಯಾವುದೇ ಅಹಿತಕರ ಹಾಗೂ ಭದ್ರತಾ ಲೋಪ ಉಂಟಾಗದ ರೀತಿ ಬಿಗಿ ಭದ್ರತೆ  ಕೈಗೊಳ್ಳುವ ಉದ್ದೇಶದಿಂದ ಎಡಿಜಿಪಿ ಅಲೋಕ್ ಕುಮಾರ್ ಅವರಿಂದು ಬಂಡೀಪುರಕ್ಕೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಬಂಡೀಪುರ ಸಫಾರಿ ಕೇಂದ್ರದ ಸಮೀಪವೇ 3 ಹೆಲಿಪ್ಯಾಡ್ ನಿರ್ಮಾಣಗೊಳ್ಳುತ್ತಿದ್ದು ಸಾರ್ವಜನಿಕರು, ಅಭಿಮಾನಿಗಳನ್ನು ನಿಯಂತ್ರಿಸಲು ಸೂಕ್ತ ಬ್ಯಾರಿಕೇಡ್, ಕಾಂಪೌಂಡ್ ವ್ಯವಸ್ಥೆ ಇರಬೇಕು, ವನ್ಯಜೀವಿಗಳು ರಸ್ತೆ ದಾಟುವುದನ್ನು ನಿಗಾ ಇಡಬೇಕು  ಸೇರಿದಂತೆ ಇತರೆ ಸೂಚನೆಗಳನ್ನು ಐಜಿಪಿ ಮಧುಕರ್ ಪವಾರ್ ಹಾಗೂ ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹೋ ಅವರಿಗೆ ಕೊಟ್ಟಿದ್ದಾರೆ. 


ಇದನ್ನೂ ಓದಿ: Siddaramaiah : ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಅಯ್ಯಪ್ಪ ಸ್ವಾಮಿ ಮೊರೆ ಹೋದ ಯುವ ಉದ್ಯಮಿ 


ಏ.9 ರಂದು ಬಂಡೀಪುರಕ್ಕೆ ಬರಲಿರುವ ವಿಶೇಷ ಹೆಲಿಕಾಪ್ಟರ್ ಮೂಲಕ ನರೇಂದ್ರ ಮೋದಿ ಬರಲಿದ್ದು ಸಫಾರಿ, ರಾಂಪುರ ಆನೆ ಶಿಬಿರಕ್ಕೆ ಭೇಟಿ ಕೊಡಲಿದ್ದಾರೆ. ಜೊತೆಗೆ, ಮಾವುತರ ಜೊತೆ ಸಂವಾದ ನಡೆಸಲಿದ್ದು ಅದಾದ ಬಳಿಕ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ತೆರಳುವರು ಎಂದು ತಿಳಿದುಬಂದಿದೆ. ಮೋದಿ ಅವರ ಅಧಿಕೃತ ಪ್ರವಾಸ ಪಟ್ಟಿ ಇನ್ನೂ ಕೂಡ ಬಿಡುಗಡೆಯಾಗಿಲ್ಲ. ಆದರೆ, ಪ್ರಧಾನಿ ಬಂಡೀಪುರಕ್ಕೆ ಭೇಟಿ ಕೊಡುವ ಸಾಧ್ಯತೆ ತೀರಾ ಹೆಚ್ಚಿದೆ.


ಇದನ್ನೂ ಓದಿ: ದೇವಾಲಯದ ಸಿಸಿ ಟಿವಿಯಲ್ಲಿ ನಿಗೂಢ ಬೆಳಕು- ದಿವ್ಯ ಜ್ಯೋತಿ ಎಂದ ಭಕ್ತರುhttps://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.