ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಜೂ.12ರಂದು ನಡೆಯಲಿದೆ.


COMMERCIAL BREAK
SCROLL TO CONTINUE READING

ಮತಎಣಿಕೆ ಹಿನ್ನೆಲೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಚುನಾವಣಾಧಿಕಾರಿ ಹೇಮಲತಾ ಅವರು, ಮತಎಣಿಕೆಗೆ ನಗರ ಮಹಾರಾಣಿ ಕಾಲೇಜಿನಲ್ಲಿ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ. ನಾಳೆ ಬೆಳಿಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್'ನಿಂದ ಮತ ಪೆಟ್ಟಿಗೆಗಳನ್ನು ತೆಗೆದು 8 ಗಂಟೆಗೆ ಮತಎಣಿಕೆ ಆರಂಭಿಸಲಾಗುವುದು,. ನಾಳೆ ರಾತ್ರಿ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. 


ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್, ಜೆಡಿಎಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ, ಬಿಜೆಪಿ ಅಭ್ಯರ್ಥಿಯಾಗಿ ನಿರಂಜನಮೂರ್ತಿ ಹಾಗೂ ಪಕ್ಷೇತರರಾಗಿ ಎ.ಹೆಚ್.ಗೋಪಾಲಕೃಷ್ಣ, ಡಿ.ಕೆ.ತುಳಸಪ್ಪ, ಡಾ.ಎಸ್.ಬಿ.ಎಂ. ಪ್ರಸನ್ನ, ಡಾ.ಮಹಾದೇವ, ಎಂ.ಎನ್ ರವಿಶಂಕರ್, ಪಿ.ಎ.ಶರತ್ ರಾಜ್ ಸ್ಪರ್ಧಿಸಿದ್ದರು.