ನಲಪಾಡ್ ಜಾಮೀನು ಅರ್ಜಿ ಆದೇಶ ಮಾ.2ಕ್ಕೆ ಮುಂದೂಡಿಕೆ
ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ 63ನೇ ನಗರ ಸೆಷನ್ಸ್ ನ್ಯಾಯಾಲಯ ತೀರ್ಪನ್ನು ಮಾರ್ಚ್ 2ಕ್ಕೆ ಮುಂದೂಡಿದೆ.
ಬೆಂಗಳೂರು: ಉದ್ಯಮಿ ಪತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ 63ನೇ ನಗರ ಸೆಷನ್ಸ್ ನ್ಯಾಯಾಲಯ ತೀರ್ಪನ್ನು ಮಾರ್ಚ್ 2ಕ್ಕೆ ಮುಂದೂಡಿದೆ.
ಮೊಹಮ್ಮದ್ ನಲಪಾಡ್ ಪರವಾಗಿ ವಕೀಲರಾದ ಟಾಮಿ ಸೆಬಾಷ್ಟಿಯನ್ ವಾದ ಮಂಡಿಸಿದ್ದು, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ಅವರು ಪ್ರತಿವಾದ ಮಂಡಿಸಿದ್ದರು.
ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 63ನೇ ನಗರ ಸೆಷನ್ಸ್ ನ್ಯಾಯಾಲಯವು ತೀರ್ಪನ್ನು ಮಾರ್ಚ್ 2ಕ್ಕೆ ಮುಂದೂಡಿದೆ. ಇಂದು ಇತರೆ ಆರೋಪಿಗಳ ಪರ ವಕೀಲ ಎಸ್.ಬಾಲನ್ ದೀರ್ಘ ವಾದ ಮಂಡಿಸಿದರು. ಅವರ ನಂತರ ನಲಪಾಡ್ ಪರ ವಕೀಲ ಟಾಮಿ ಸೆಬಾಸ್ಟಿಯನ್ ಮತ್ತು ವಿಶೇಷ ಸಾರ್ವಜನಿಕ ಅಭಿಯಂತರ (SPP) ಶ್ಯಾಮ್ ಸುಂದರ್ ಅವರು ವಾದ ಮಂಡಿಸಿದರು.
ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ತಲೆಮರೆಸಿಕೊಂಡಿದ್ದ ನಲಪಾಡ್ ಫೆ.19ರಂದು ಪೊಲೀಸರಿಗೆ ಶರಣಾಗಿದ್ದರು. ಪ್ರಸ್ತುತ ಈ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ನಲಪಾಡ್ ಸೇರಿದಂತೆ 7 ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.