ವಿದ್ವತ್ ಹಲ್ಲೆ ಪ್ರಕರಣ; ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು
ಉದ್ಯಮಿ ಪುತ್ರ ವಿದ್ವತ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಸಹಚರರಾದ ಉಳಿದ ಐವರು ಆರೋಪಿಗಳಿಗೂ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಸಹಚರರಾದ ಉಳಿದ ಐವರು ಆರೋಪಿಗಳಿಗೂ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಮತ್ತೊಬ್ಬ ಆರೋಪಿ ಅಭಿಷೇಕ್ ಎಂಬಾತನಿಗೆ ಇತ್ತಿಚೆಗಷ್ಟೇ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣದ ಉಳಿದ ಐವರು ಆರೋಪಿಗಳ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ನಲಪಾಡ್‌ಗೆ ರಂಜಾನ್ ಗಿಫ್ಟ್; ಜಾಮೀನು ನೀಡಿದ ಹೈಕೋರ್ಟ್
ಆರೋಪಿಗಳಾದ ಮಂಜುನಾಥ್, ಮಹಮದ್ ಅಶ್ರಫ್, ಮಹಮದ್ ನಾಸಿರ್, ಅರುಣ್ ಬಾಬು ಮತ್ತು ಬಾಲಕೃಷ್ಣಗೆ ಜಾಮೀನು ದೊರೆತಿದ್ದು, ಪರಪ್ಪನ ಅಗ್ರಹಾರದಿಂದ ಬಿಡುಗಡೆಯ ಭಾಗ್ಯ ದೊರೆತಿದೆ.
ಹಲ್ಲೆ ಪ್ರಕರಣ: ನಲಪಾಡ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ತಲೆಮರೆಸಿಕೊಂಡಿದ್ದ ನಲಪಾಡ್ ಫೆ.19ರಂದು ಪೊಲೀಸರಿಗೆ ಶರಣಾಗಿದ್ದರು.