ಬೆಂಗಳೂರು: ಮಾಜಿ ಸಚಿವ ರೆನುಕಾಚರಾಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನುರಹಿತ ವಾರೆಂಟ್ ಆದೇಶ ಹೊರಡಿಸಿದೆ.
ಚುನಾವಣೆ ಮಾದರಿ ನೀತಿ ಸಂಹಿತಿ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚುನಾವಣೆ ಮಾದರಿ ನೀತಿ ಸಂಹಿತಿ ಉಲ್ಲಂಘನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಆದರೆ ಇಂದು ವಿಚಾರಣೆಗೆ ಮಾಜಿ ಸಚಿವ ರೇಣುಕಾಚಾರ್ಯ ಅವರು ಗೈರಾದ ಕಾರಣ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದರ್ ಈ ಆದೇಶ ನೀಡಿದ್ದಾರೆ.