ಬೆಂಗಳೂರು: ಐಪಿಎಲ್ ಪಂದ್ಯಾವಳಿ ವೇಳೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ 14 ಆರೋಪಿಗಳ ಪೈಕಿ ಮೂವರಿಗೆ ಎನ್ಐಎ ವಿಶೇಷ ನ್ಯಾಯಾಲಯ ಸೋಮವಾರ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


COMMERCIAL BREAK
SCROLL TO CONTINUE READING

ಕಳೆದ ಬುಧವಾರ ಸ್ಫೋಟ ಪ್ರಕರಣದ 5ನೇ ಆರೋಪಿಯಾಗಿರುವ ಗೌಹಾರ್ ಅಜೀಜ್ ಖೋಮೆನಿ, 12ನೇ ಆರೋಪಿ ಕಮಲ್ ಹಸನ್ ಅಲಿಯಾಸ್ ಕಮಲ್ ಹಾಗೂ 13ನೇ ಆರೋಪಿ ಮೊಹಮ್ಮದ್ ಕಫೀಲ್ ಅಖ್ತರ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಅವರು ಇಂದು ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ, ಅದರಲ್ಲಿ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 


ಅಪರಾಧಿಗಳಾದ ಅಜೀಜ್ ಕೊಮಾನಿ ಹಾಗೂ ಕಮಲ್ ಹಸನ್ ಗೆ ತಲಾ 7.5 ಲಕ್ಷ ರೂ. ದಂಡ ಹಾಗೂ ಇನ್ನೊಬ್ಬ ಅಪರಾಧಿ ಕಪಿಲ್ ಅಕ್ತರ್​ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಒಂದು ವೇಳೆ ದಂಡ ಪಾವತಿಸದಿದ್ದಲ್ಲಿ ಮತ್ತೊಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಆದೇಶಿಸಿದ್ದಾರೆ. 


2010ರ ಏಪ್ರಿಲ್‌ 17ರಂದು ಐಪಿಎಲ್‌ ಪಂದ್ಯ ಆರಂಭಕ್ಕೆ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಮೂರು ಬಾಂಬ್‌ ಸ್ಫೋಟಗೊಂಡಿದ್ದವು. ಘಟನೆಯಲ್ಲಿ ಪೊಲೀಸರು ಸೇರಿದಂತೆ 15 ಜನ ಗಾಯಗೊಂಡಿದ್ದರು. ಇದೇ ವೇಳೆ ಸ್ಫೋಟಗೊಳ್ಳದ ಎರಡು ಬಾಂಬ್‌ಗಳು ದೊರಕಿದ್ದವು.