ಗೌರಿ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
16 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ವಾದ-ಪ್ರತಿವಾದಗಳನ್ನು ಆಲಿಸಿ, ತೀರ್ಪನ್ನು ಕಾಯ್ದಿರಿಸಿದರು.
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಿಟಿ ಸಿವಿಲ್ ನ್ಯಾಯಾಲಯ, ತೀರ್ಪನ್ನು ಫೆಬ್ರವರಿ 7ಕ್ಕೆ ಕಾಯ್ದಿರಿಸಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ಸೇರಿದಂತೆ 16 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ವಾದ-ಪ್ರತಿವಾದಗಳನ್ನು ಆಲಿಸಿ, ತೀರ್ಪನ್ನು ಕಾಯ್ದಿರಿಸಿದರು.
ಈ ಪ್ರಕರಣಕ್ಕೆ ಅಮೋಲ್ ಕಾಳೆ, ಪರಶುರಾಮ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ಬದ್ದಿ ಸೇರಿ 17 ಆರೋಪಿಗಳ ಹೆಸರನ್ನು ವಿಶೇಷ ತನಿಖಾ ತಂಡ ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖಿಸಿ ಇತ್ತೀಚೆಗಷ್ಟೇ ನ್ಯಾಯಾಲಯಕ್ಕೆ ಸಲ್ಲಿಸಿತ್ತು.
2017ರ ಸೆಪ್ಟೆಂಬರ್ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ.