ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಹೆಚ್‌ಡಿಕೆಗೆ ಸಮನ್ಸ್ ಜಾರಿ

ಬೆಂಗಳೂರಿನ ಬನಶಂಕರಿ ಬಳಿಯ ಹಲಗೆ ವಡೇರಹಳ್ಳಿಯ 2.24 ಎಕರೆ ಭೂಮಿಯನ್ನು 2007ರಲ್ಲಿ ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಚಾಮರಾಜನಗರ ಮಹದೇವಸ್ವಾಮಿ ಎಂಬುವವರು ಸಲ್ಲಿಸಿದ್ದರು. 

Last Updated : Sep 5, 2019, 05:46 PM IST
ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಹೆಚ್‌ಡಿಕೆಗೆ ಸಮನ್ಸ್ ಜಾರಿ title=

ಬೆಂಗಳೂರು: ಅಕ್ರಮ ಭೂ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿ ಮಾಡಿದೆ.

ಈ ಹಿಂದೆ ಬೆಂಗಳೂರಿನ ಬನಶಂಕರಿ ಬಳಿಯ ಹಲಗೆ ವಡೇರಹಳ್ಳಿಯ 2.24 ಎಕರೆ ಭೂಮಿಯನ್ನು 2007ರಲ್ಲಿ ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಚಾಮರಾಜನಗರ ಮಹದೇವಸ್ವಾಮಿ ಎಂಬುವವರು ಸಲ್ಲಿಸಿದ್ದರು. ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಸಂಬಂಧ ದೂರುದಾರರು ಮೇಲ್ಮನವಿ ಸಲ್ಲಿಸಿದ್ದರು. 

ಇದೀಗ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಮರುಜೀವ ಬಂದಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಅಕ್ಟೋಬರ್ 4ರದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. 

Trending News