ಬೆಂಗಳೂರು: Covid Death: ಈ ಹಿಂದೆ ಸರ್ಕಾರ ಕೋವಿಡ್-19 (Covid-19) ರಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಘೋಷಣೆ ಮಾಡಿದ್ದು, ವಿಳಂಬವಾದರೂ ಪರಿಹಾರ ಮೊತ್ತ ಬ್ಯಾಂಕ್ ಖಾತೆಗೆ ಜಮಾವಣೆ ಆಗಲು ಪ್ರಾರಂಭ ಆಗಿದೆ. ಆಶ್ಚರ್ಯ ಎಂದರೆ ಅನೇಕ ಕುಟುಂಬದವರು ಪರಿಹಾರ ಸ್ವೀಕಾರ ಮಾಡಲು ನಿರಾಕರಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಬಿಪಿಎಲ್ (BPL) ಪಡಿತರ ಚೀಟಿ ಹೊಂದಿರುವ ಕುಟುಂಬದ ದುಡಿಯುವ ವ್ಯಕ್ತಿ ಕೋವಿಡ್-19 (Covid-19) ಸೋಂಕಿನಿಂದ ಮೃತಪಟ್ಟರೆ ರಾಜ್ಯ ಸರ್ಕಾರ ₹1 ಲಕ್ಷ ಪರಿಹಾರ ಘೋಷಣೆ ಮಾಡಿತ್ತು. ಇದರ ಜತೆಗೆ ಕೇಂದ್ರ ಸರ್ಕಾರ ಕೂಡ ₹50 ಸಾವಿರ ಪರಿಹಾರ ಘೋಷಣೆ ಮಾಡಿತ್ತು. ಹೀಗಾಗಿ, ಬಿಪಿಎಲ್ ಕುಟುಂಬದ ದುಡಿಯುವ ವ್ಯಕ್ತಿ ಕೋವಿಡ್-19 ರಿಂದ ಮೃತ ಪಟ್ಟ ಸಂದರ್ಭದಲ್ಲಿ ಒಟ್ಟು ₹1.50 ಲಕ್ಷ ಪರಿಹಾರದ ಮೊತ್ತವನ್ನು ಮೃತರ ವಾರಸುದಾರರಿಗೆ ನೀಡಲಾಗುತ್ತಿದೆ.


ಕಂದಾಯ ಇಲಾಖೆ ಅಂಕಿಅಂಶಗಳ ಪ್ರಕಾರ ಈವರೆಗೆ 22,661 ಪರಿಹಾರ ಹಣ ಕೋರಿ ಅರ್ಜಿ ಸ್ವೀಕರಿಸಿದೆ. ಆ ಪೈಕಿ ಬಿಪಿಎಲ್ (BPL) ಕುಟುಂಬದ ವಾರಸುದಾರರು 13,423 ಅರ್ಜಿ ಸಲ್ಲಿಸಿದ್ದಾರೆ. ಇನ್ನು ಎಪಿಎಲ್ ಕಾರ್ಡ್ ದಾರರು ಪರಿಹಾರ ಕೋರಿ 13,238 ಅರ್ಜಿ ಸಲ್ಲಿಸಿದ್ದಾರೆ. 


ಇದನ್ನೂ ಓದಿ- Covid-19: ಕರೋನಾ ಪಾಸಿಟಿವ್ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ನಂತರ ಪರೀಕ್ಷೆ ಅಗತ್ಯವಿದೆಯೇ ಅಥವಾ ಇಲ್ಲವೇ? ಸತ್ಯೇಂದ್ರ ಜೈನ್ ಹೇಳಿದ್ದೇನು ಗೊತ್ತಾ


825 ಮಂದಿಯಿಂದ ಪರಿಹಾರ ನಿರಾಕರಣೆ:
ಅದಾಗ್ಯೂ, ಒಟ್ಟು 825 ಮಂದಿ ಫಲಾನುಭವಿಗಳು ಪರಿಹಾರ ಮೊತ್ತವನ್ನು ಪಡೆಯಲು ನಿರಾಕರಿಸಿದ್ದಾರೆ. ಬೆಂಗಳೂರಿನ (Bengaluru) 481 ಮಂದಿ ಫಲಾನುಭವಿಗಳು ಪರಿಹಾರ (Covid-19 Compensation) ಮೊತ್ತವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಇದಲ್ಲದೆ, ಕೋಲಾರದ 55, ಬೆಂಗಳೂರು ನಗರದಿಂದ 37, ಧಾರವಾಡದ 29, ಮೈಸೂರಿನ 26, ಹಾಸನದ 25, ದ.ಕನ್ನಡ ಜಿಲ್ಲೆಯ 21 ಮಂದಿ ಫಲಾನುಭವಿಗಳು ಪರಿಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಸ್ಥಿತಿವಂತ ಕುಟುಂಬಸ್ಥ ಹಲವರು ಪರಿಹಾರ ಮೊತ್ತ ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


[[{"fid":"226469","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]


ಇನ್ನು ಇತರೆ ರಾಜ್ಯಗಳ 476 ಫಲಾನುಭವಿಗಳಾಗಿದ್ದಾರೆ. ಅವರಿಗೆ ಪರಿಹಾರ ಹಣ ನೀಡಿಲ್ಲ. 1436 ಫಲಾನುಭವಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಈವರೆಗೆ ಒಟ್ಟು 3043 ಫಲಾನುಭವಿಗಳಿಗೆ ಪರಿಹಾರದ ಹಣವನ್ನು ನೀಡಲು ಸಾಧ್ಯವಾಗಿಲ್ಲ.


ಇದನ್ನೂ ಓದಿ- ಕೋವಿಡ್ ಮೂರನೇ ಅಲೆ ಚಿಕಿತ್ಸೆಗೆ ಶೇ 75 ಬೆಡ್ ಮೀಸಲು


ಇನ್ನು ಉಳಿದಂತೆ ಬಿಪಿಎಲ್ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಘೋಷಿಸಿರುವ 1 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಈವರೆಗೆ 25,281 ಫಲಾನುಭವಿಗಳಿಗೆ ಪರಿಹಾರ ನೀಡಲಾಗಿದೆ. ಈ ಪರಿಹಾರ ಪೈಕಿ ಕೇಂದ್ರ ಸರ್ಕಾರ ಘೋಷಿಸಿರುವ 50,000 ಪರಿಹಾರವೂ ಒಳಗೊಂಡಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.


ಇದಲ್ಲದೆ, ಆಧಾರ್ ಕಾರ್ಡ್ (Aadhaar Card) ಇಲ್ಲದ ಕಾರಣ ಒಟ್ಟು 4,000 ಅರ್ಜಿಗಳ ಪಾವತಿಯನ್ನು ಸದ್ಯಕ್ಕೆ ತಡೆ ಹಿಡಿಯಲಾಗಿದೆ. ಅವರಿಗೆ ಆಧಾರ್ ಸಂಖ್ಯೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಆಧಾರ್ ಕಾರ್ಡ್ ಮಾಹಿತಿ ನೀಡಿದ ತಕ್ಷಣ ಅವರ ಖಾತೆಗೂ ಪರಿಹಾರ ಹಣ ಜಮೆಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ