COVID-19: ಕರ್ತ್ಯವ್ಯದಲ್ಲಿದ್ದ ಮಹಿಳಾ ವೈದ್ಯರ ಮೇಲಿನ ದಾಳಿ ಶಿಕ್ಷಾರ್ಹ ಅಪರಾಧ
ಬಳ್ಳಾರಿ ಆಸ್ಪತ್ರೆಯ ದಾಳಿಯನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕೂಡ ಖಂಡಿಸಿದೆ. ಇಂತಹ ಘಟನೆಗಳು ಮುಂದುವರಿದರೆ, ಅನೇಕ ಯುವ ವೈದ್ಯರು ಅನಾರೋಗ್ಯದಿಂದ ಬಳಲುತ್ತಿರುವ ಜನರಿಗೆ ಚಿಕಿತ್ಸೆ ನೀಡುವ ಧೈರ್ಯವನ್ನು ಕಳೆದುಕೊಳ್ಳಬಹುದು ಎಂದು ರಾಷ್ಟ್ರೀಯ ಐಎಂಎ ಸ್ಥಾಯಿ ಸಮಿತಿಯ ಅಧ್ಯಕ್ಷ ಡಾ.ಶ್ರೀನಿವಾಸ. ಎಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿ: ಬಳ್ಳಾರಿಯ ಆಸ್ಪತ್ರೆಯಲ್ಲಿ ಕೋವಿಡ್ ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯರ ಮೇಲೆ ಕರೋನಾ ರೋಗಿಯ ಕುಟುಂಬದವರು ನಡೆಸಿರುವ ದಾಳಿಯನ್ನು ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಖಂಡಿಸಿದ್ದಾರೆ.
ಘಟನೆ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಡಾ. ಕೆ. ಸುಧಾಕರ್ (Dr K Sudhakar), ಕರ್ತವ್ಯದಲ್ಲಿರುವ ಮಹಿಳಾ ವೈದ್ಯರ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ. ಇದು 5 ವರ್ಷಗಳ ಜೈಲು ಶಿಕ್ಷೆಯೊಂದಿಗೆ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದ್ದಾರೆ.
Corona: ಮೂರು ರಾಜ್ಯಗಳಲ್ಲಿ ಮಕ್ಕಳಲ್ಲಿ ಹೆಚ್ಚಾದ ಕರೋನಾ ಸೋಂಕು, ಇದರ ಲಕ್ಷಣಗಳೇನು?
ಏನಿದು ಪ್ರಕರಣ?
ವಿಮ್ಸ್ ಆಸ್ಪತ್ರೆಯಲ್ಲಿ (VIMS Hospital) ಭಾನುವಾರ ಕೋವಿಡ್ -19 ರೋಗಿಯ (Covid Patient) ಸಂಬಂಧಿ ತಿಪ್ಪೇಸ್ವಾಮಿ ಎಂ. ಎಂಬಾತ ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯೆ ಡಾ. ಪ್ರಿಯದರ್ಶಿನಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದಕ್ಕೂ ಮೊದಲು ತಿಪ್ಪೇಸ್ವಾಮಿ ಕೋವಿಡ್ -19 ವಾರ್ಡ್‌ನೊಳಗಿನ ಡಾ. ಪ್ರಿಯದರ್ಶಿನಿ ಅವರೊಂದಿಗೆ ವಾಗ್ವಾದ ನಡೆಸುತ್ತಿದ್ದರು ಎನ್ನಲಾದ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಇಡೀ ಘಟನೆ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಕರ್ತವ್ಯನಿರತ ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅನೇಕ ನೆಟಿಜನ್‌ಗಳು ಆಗ್ರಹಿಸಿದ್ದಾರೆ. ಅಲ್ಲದೇ, ತಮ್ಮ ಜೀವದ ಹಂಗನ್ನು ತೊರೆದು ಕೋವಿಡ್ -19 (COVID-19) ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವವರಿಗೆ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಉತ್ತಮ ಭದ್ರತೆ ನೀಡುವಂತೆ ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ - ಮಳೆಗಾಲದಲ್ಲಿ ಬ್ಲ್ಯಾಕ್ ಫಂಗಸ್ ನಿಂದ ಬಚಾವ್ ಆಗಿ.! ಈ ಮುನ್ನೆಚ್ಚರಿಕೆ ಇರಲಿ
ಈ ಘಟನೆಗೆ ಸಂಬಂಧಿಸಿದಂತೆ ಕೌಲ್ ಬಜಾರ್ ಪೊಲೀಸರು ಹಲ್ಲೆ ಮಾಡಿರುವ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆ ಕುರಿತಂತೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, ಹಲ್ಲೆ ನಡೆಸಿರುವ ತಿಪ್ಪೇಸ್ವಾಮಿ ಎಂಬ ವ್ಯಕ್ತಿಯ ತಂದೆ ಕಳೆದ ಒಂದು ವಾರದಿಂದ ಇದೇ ಆಸ್ಪತ್ರೆಯಲ್ಲಿ ಕರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಅವರು ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಸಾವು ಹೇಗೆ ಸಂಭವಿಸಿದೆ ಎಂಬುದನ್ನು ವಿವರಿಸಲು ವೈದ್ಯರು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದ್ದಾರೆ. ಆದರೆ ಅದನ್ನು ಅರ್ಥಮಾಡಿಕೊಳ್ಳದ ತಿಪ್ಪೇಸ್ವಾಮಿ ವೈದ್ಯರ ಮೇಲೆಯೇ ಹಲ್ಲೆ ನಡೆಸಿದ್ದಾನೆ ಎಂದು ವಿವರಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.