Covid-19 JN.1: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ! ಆತಂಕ ಬೇಡ, ಎಚ್ಚರವಿರಲಿ ಎಂದ ಸಿಎಂ!

Covid-19 JN.1: ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿವೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. 7 ಜನ ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ.

Written by - Puttaraj K Alur | Last Updated : Dec 21, 2023, 04:28 PM IST
  • ರಾಜ್ಯದಲ್ಲಿ ಕೋವಿಡ್‌- 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿವೆ
  • ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಕೊರೊನಾ ಪ್ರಕರಣಗಳು ವರದಿಯಾಗಿವೆ
  • ರಾಜ್ಯದಲ್ಲಿ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ನಿತ್ಯ 5000ಕ್ಕೆ ಹೆಚ್ಚಿಸಲಾಗಿದೆ
Covid-19 JN.1: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ! ಆತಂಕ ಬೇಡ, ಎಚ್ಚರವಿರಲಿ ಎಂದ ಸಿಎಂ! title=
ಆತಂಕ ಬೇಡ, ಎಚ್ಚರವಿರಲಿ ಎಂದ ಸಿಎಂ!

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಹೊಸ ಕೋವಿಡ್ JN.1 ಸೊಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದ ಸ್ಥಿತಿಗತಿ ಹಾಗೂ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಚರ್ಚಿಸಲು ಗುರುವಾರ ಸಿಎಂ ಸಿದ್ದರಾಮಯ್ಯನವರು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಸಭೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯ ಮುಖ್ಯಾಂಶಗಳು

  • ಕೋವಿಡ್‌- 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಅದರಲ್ಲೂ JN.1 ಎಂಬ ಹೊಸ ತಳಿಯ ವೈರಸ್‌ ಪತ್ತೆಯಾಗಿದೆ.
  • ಕಳೆದ 1 ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ.
  • ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಕೊರೊನಾ ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ 2,041, ತಮಿಳುನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 ಸಕ್ರಿಯ ಪ್ರಕರಣಗಳಿವೆ.
  • ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿವೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. (Home Isolation). 20 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. 7 ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ.
  • ರಾಜ್ಯದಲ್ಲಿ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ನಿತ್ಯ 5000ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1,500 Rapid Antigen Test ಹಾಗೂ 3,500 RTPCR ಪರೀಕ್ಷೆಗಳಾಗಿವೆ. ಬೆಂಗಳೂರು ನಗರದಲ್ಲಿ 1,000 ಪರೀಕ್ಷೆಗಳನ್ನು ನಡೆಸಲಾಗುವುದು. ಗಡಿ ಭಾಗಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುವುದು.
  • ಕರ್ನಾಟಕದಲ್ಲಿ ಡಿಸೆಂಬರ್‌ 15ರಂದು 1 ಹಾಗೂ ಡಿಸೆಂಬರ್‌ 20ರಂದು 2 ಸಾವುಗಳು ಸಂಭವಿಸಿವೆ. ಈ 3 ಪ್ರಕರಣಗಳಲ್ಲಿ ಎಲ್ಲರೂ ಇತರ ಆರೋಗ್ಯ ಸಮಸ್ಯೆಗಳಿಂದ (Co-Morbidity) ಬಳಲುತ್ತಿದ್ದರು.
  • ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ. ಕೋವಿಡ್‌ -19 ಈಗ Pandemic ಆಗಿ ಉಳಿದಿಲ್ಲ. Endemic ಆಗಿದೆ. ಸರ್ಕಾರವೂ ಸಹ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ.
  • ಕೊರೊನಾದಿಂದ ಮೃತರಾದವರು Co-morbidity ಇರುವವರು, ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ, ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದವರ ಜಿನೋಮ್‌ ಸಿಕ್ವೆನ್ಸಿಂಗ್‌ ಮಾಡಲಾಗುತ್ತಿದೆ.

ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ

ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಸಲಹೆಗಳ ಕುರಿತು ಇಂದಿನ ಸಭೆಯಲ್ಲಿ ಈ ಕೆಳಕಂಡ ತೀರ್ಮಾನ ಕೈಗೊಳ್ಳಲಾಗಿದೆ

  • ಹಿಂದಿನ ಕೋವಿಡ್‌ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು.
  • ಆಕ್ಸಿಜನ್‌, ವೆಂಟಿಲೇಟರ್‌ & ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನರು ಮೃತಪಟ್ಟರು. ಆಕ್ಸಿಜನ್‌ ಲಭ್ಯತೆಯನ್ನು ಖಾತರಿ ಪಡಿಸಬೇಕು.
  • ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಈ ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು.
  • ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು.
  • ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು.
  • ಕೋವಿಡ್‍ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.
  • ಎಲ್ಲಾ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ಮಾಡಲಾಗಿದೆ. ಎಲ್ಲಾ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ.

ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳು ಹಾಗೂ ರಾಜ್ಯದಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು

  • 60 ವರ್ಷ ಮೇಲ್ಪಟ್ಟ ಎಲ್ಲರೂ ಕಿಡ್ನಿ, ಹೃದಯ, ಲಿವರ್‌ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು ಮಾಸ್ಕ್‌ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡದೆ ಇರುವುದು.
  • ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್‌ ಧರಿಸುವುದು.
  • ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯಲ್ಲೇ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ.
  • ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್‌ ಧರಿಸುವುದು ಉತ್ತಮ.
  • ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು.
  • ಕೇಂದ್ರ ಸರ್ಕಾರವೂ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಂತೆ ರಾಜ್ಯವೂ ಕೇರಳ ಮತ್ತು ತಮಿಳುನಾಡು ಗಡಿಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.
  • ಎಲ್ಲಾ ಖಾಸಗಿ & ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು 20ರಲ್ಲಿ 1 ಜ್ವರ (ILI)ದ ಪ್ರಕರಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚಿಸಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ರಣತಂತ್ರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News