ಬೆಂಗಳೂರು : ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಸಭೆಯ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ (Siddaramaiah)  ಅವರು ಈಗ ಪೂರ್ಣ ಗುಣಮುಖರಾಗಿದ್ದಾರೆ. 


COMMERCIAL BREAK
SCROLL TO CONTINUE READING

ಯುರಿನರಿ ಇನ್ಫೆಕ್ಷನ್ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗಸ್ಟ್ 3ರಂದು ಮಧ್ಯರಾತ್ರಿ 3.30ರ ಸುಮಾರಿಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ COVID -19 ಪರೀಕ್ಷೆ ಮಾಡಲಾಗಿತ್ತು. ಬಳಿಕ ಅವರಿಗೆ  ಸೋಂಕಿನ ಯಾವುದೇ ಲಕ್ಷಣಗಳಿಲ್ಲದಿದ್ದರೂ   ಕೋವಿಡ್ -19 (Covid 19) ಪರೀಕ್ಷೆಯ ವರದಿಯಲ್ಲಿ ಕೊರೋನಾವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. 


ಮೋದಿ ಎದುರು ಪ್ರವಾಹಕ್ಕೆ ಪರಿಹಾರ ಕೊಡಿ ಅಂತಾ ಕೇಳುವ ಧೈರ್ಯ ಬಿಜೆಪಿಯವರಿಗಿಲ್ಲ, ನಾನೇ ಕೇಳುತ್ತೇನೆ: ಸಿದ್ದರಾಮಯ್ಯ


ಕಳೆದೊಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 


ಆಸ್ಪತ್ರೆಯಲ್ಲಿದ್ದರೂ ಹೋರಾಟ ಬಿಡದ ಸಿದ್ದರಾಮಯ್ಯ, ಪ್ರವಾಹ ಪರಿಸ್ಥಿತಿ ನಿರ್ವಹಿಸದ ರಾಜ್ಯ ಸರ್ಕಾರಕ್ಕೆ ತರಾಟೆ


ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಅವರು ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್  ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.