Covid-19 Review Meeting : ಸಿಎಂ ಅಧ್ಯಕ್ಷತೆಯಲ್ಲಿ ಕೋವಿಡ್ ಪರಿಶೀಲನಾ ಸಭೆ : ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಂಡ ತೀರ್ಮಾನಗಳೇನು?

ಸಭೆಯಲ್ಲಿ ಆರ್ ಟಿ ನಗರದಿಂದ ಸಿಎಂ ಬೊಮ್ಮಾಯಿ, ಶಿವಮೊಗ್ಗದಿಂದ ಗೃಹ ಸಚಿವ ಆರಗ ಜ್ಞಾನೇಂದ್ರ, ತಿಪಟೂರಿನಿಂದ ಬಿಸಿ ನಾಗೇಶ್, ಜಯನಗರ ನಿವಾಸದಿಂದ ಅಶೋಕ್, ಡಾಲರ್ಸ್ ಕಾಲೋನಿ ನಿವಾಸದಿಂದ ಡಾ ಅಶ್ವಥ್ ನಾರಾಯಣ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ತಜ್ಞರು ಅವರಿರುವ ಸ್ಥಳಿಂದ ವರ್ಚುವಲ್ ಮೂಲಕ ಭಾಗಿಯಾಗಿದ್ದರು. 

Written by - Channabasava A Kashinakunti | Last Updated : Jan 17, 2022, 06:48 PM IST
  • ಇಂದು ಸಂಜೆ ಸಿಎಂ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ 19 ಪರಿಶೀಲನಾ ಸಭೆ
  • ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚನೆ
  • ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ
Covid-19 Review Meeting : ಸಿಎಂ ಅಧ್ಯಕ್ಷತೆಯಲ್ಲಿ ಕೋವಿಡ್ ಪರಿಶೀಲನಾ ಸಭೆ : ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಂಡ ತೀರ್ಮಾನಗಳೇನು? title=

ಬೆಂಗಳೂರು : ವರ್ಚುವಲ್ ಮೂಲಕ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ 19 ಕುರಿತ ಪರಿಶೀಲನಾ ಸಭೆ ನಡೆಯಿತು. 

ಸಭೆಯಲ್ಲಿ ಆರ್ ಟಿ ನಗರದಿಂದ ಸಿಎಂ ಬೊಮ್ಮಾಯಿ, ಶಿವಮೊಗ್ಗದಿಂದ ಗೃಹ ಸಚಿವ ಆರಗ ಜ್ಞಾನೇಂದ್ರ, ತಿಪಟೂರಿನಿಂದ ಬಿಸಿ ನಾಗೇಶ್, ಜಯನಗರ ನಿವಾಸದಿಂದ ಅಶೋಕ್, ಡಾಲರ್ಸ್ ಕಾಲೋನಿ ನಿವಾಸದಿಂದ ಡಾ ಅಶ್ವಥ್ ನಾರಾಯಣ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ತಜ್ಞರು ಅವರಿರುವ ಸ್ಥಳಿಂದ ವರ್ಚುವಲ್ ಮೂಲಕ ಭಾಗಿಯಾಗಿದ್ದರು. 

ಇದನ್ನೂ ಓದಿ : "ನಾರಾಯಣ ಗುರುಗಳ ಸ್ತಬ್ಧಚಿತ್ರ ವಿಚಾರದಲ್ಲಿ ಕೇರಳದ ಸಿಪಿಐಎಂ ಪಕ್ಷವನ್ನು ಪ್ರಶ್ನಿಸಬೇಕು, ಕೇಂದ್ರವನ್ನಲ್ಲ"

ಸಭೆಯ ಮುಖ್ಯಾಂಶಗಳು ಇಲ್ಲಿವೆ ನೋಡಿ :

1. ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ಕೊಡಲು ಸೂಚಿಸಲಾಯಿತು.. ಹೆಚ್ಚು ಸಿಬ್ಬಂದಿ ನಿಯೋಜಿಸಲು ಸೂಚಿಸಿದರು.

2. ಜನ ಟ್ರಯಾಜಿಂಗ್ ಗೆ  ದಾಖಲಾಗುವುದನ್ನು ನಿಯಂತ್ರಿಸಲು  ಸಲಹೆ ನೀಡಿದರು.

3. ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚಿಸಲಾಯಿತು. ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು.

4. ಅಂತೆಯೆ ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದರು.

5. ಔಷಧಿ ಕಿಟ್ ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಸೂಚಿಸಿದರು.

6. ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆಯಲು ಸಲಹೆ ನೀಡಿದರು.

7. ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೆಕು.

8. ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್ ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು.

9. ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ವಿಶ್ವಾಸ ಮೂಡಿಸಬೇಕು.

10. ಆಕ್ಸಿಜನ್ ಪ್ಲಾಂಟ್ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ.

11. ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು.

12. ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು.

13. ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

14. ಔಷಧಿಗಳನ್ನು ಕೂಡಲೇ ಒದಗಿಸಬೇಕು. ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ವಹಿಸಲು ಸೂಚಿಸಿದರು.

15. ಜನರು ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಬಗ್ಗೆ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಲಾಯಿತು. 

16. ಭಾರತ ಸರ್ಕಾರದ ನಿಯಮಾವಳಿಗಳಂತೆ  ಐ.ಸಿ.ಎಂ.ಆರ್ ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಅನುಸರಿಸಲು ಸೂಚಿಸಿದರು. 

17. ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ  ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒ ಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧರಿಸಲಾಯಿತು.

18. 15 ರಿಂದ 18 ವರ್ಷ  ವಯೋಮಾನದವರಿಗೆ  ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲು ಸೂಚಿಸಲಾಯಿತು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News