Covid-19: ಕರೋನಾ ಸೋಂಕಿನ ಪ್ರಕರಣಗಳು ಮತ್ತೊಮ್ಮೆ ಹೆಚ್ಚಾಗುತ್ತಿವೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ, ಈ ರಾಜ್ಯಗಳಿಂದ ಬರುವ ಜನರು ನೆಗೆಟಿವ್ ಆರ್‌ಟಿ-ಪಿಸಿಆರ್ (Negative RT-PCR Certificate) ಪ್ರಮಾಣಪತ್ರವನ್ನು ಕರ್ನಾಟಕ ಕಡ್ಡಾಯಗೊಳಿಸಿದೆ. ಈ ಆರ್‌ಟಿ-ಪಿಸಿಆರ್ ಪ್ರಮಾಣಪತ್ರವು 72 ಗಂಟೆಗಳಿಗಿಂತ ಹೆಚ್ಚು ಹಳೆಯದಾಗಿರಬಾರದು. ವಿಮಾನಗಳು, ರೈಲುಗಳು, ಬಸ್ ಅಥವಾ ಯಾವುದೇ ವೈಯಕ್ತಿಕ ವಾಹನಗಳ ಮೂಲಕ ರಾಜ್ಯಕ್ಕೆ ಪ್ರವೇಶಿಸುವವರಿಗೂ ಈ ನಿಯಮ ಅನ್ವಯಿಸಲಿದೆ. ಅಂದರೆ 72 ಗಂಟೆಗಳಿಗಿಂತ ಕಡಿಮೆ ಅವಧಿಯ ಋಣಾತ್ಮಕ  ಆರ್‌ಟಿ-ಪಿಸಿಆರ್ ವರದಿಯನ್ನು ಯಾವುದೇ ವಿಧದ ಮೂಲಕ ಕರ್ನಾಟಕಕ್ಕೆ ಪ್ರವೇಶಿಸುವಾಗ ತೋರಿಸಲೇಬೇಕು ಎಂದು ಕರ್ನಾಟಕ ಹೇಳಿದೆ. ಋಣಾತ್ಮಕ  ಕೋವಿಡ್ -19 ವರದಿಯಿಲ್ಲದೆ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರಿಗೆ ರಾಜ್ಯ ಪ್ರವೇಶಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಕರ್ನಾಟಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.


Coronavirus vaccine: 'ಎಲ್ಲ ಸರ್ಕಾರಿ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಕಡ್ಡಾಯ'


COMMERCIAL BREAK
SCROLL TO CONTINUE READING

ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ
ಮಹಾರಾಷ್ಟ್ರದಲ್ಲಿ (Maharashtra) ಹೆಚ್ಚಾಗುತ್ತಿರುವ ಕರೋನಾ ಪ್ರಕರಣಗಳ ಹಿನ್ನೆಲೆ  ಕರ್ನಾಟಕ(Karnataka) ಸರ್ಕಾರ ಈ ಸುತ್ತೋಲೆ ಹೊರಡಿಸಿದೆ. ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ರೀತಿ, ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಎರಡನೇ ಅಲೆ ಆರಂಭವಾಗಿದೆ  ಎಂಬುದು ಸ್ಪಷ್ಟಪಡಿಸುತ್ತಿದೆ. ಸುತ್ತೋಲೆಯ ಪ್ರಕಾರ, ಋಣಾತ್ಮಕ ಆರ್‌ಟಿ-ಪಿಸಿಆರ್ (RT-PCR Test) ವರದಿಗಳನ್ನು ತೋರಿಸದವರನ್ನು ತಕ್ಷಣ ನೋಡಲ್ ಸಿಬ್ಬಂದಿ/ಅಧಿಕಾರಿಗಳ ಬಳಿ ಕರೆದೊಯ್ಯಲಾಗುವುದು ಮತ್ತು ಗೊತ್ತುಪಡಿಸಿದ ಕ್ವಾರಂಟೀನ್ ಕೊಠಡಿಯಲ್ಲಿ ಇಡಲಾಗುವುದು. ಅವರ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ನಕಾರಾತ್ಮಕವಾಗಿ ಬರುವವರೆಗೂ ಅವರನ್ನು ಕ್ವಾರಂಟೀನ್ ಕೋಣೆಯಲ್ಲಿ ಇಡಲಾಗುವುದು ಎಂದು ಸರ್ಕಾರ ಹೇಳಿದೆ.


ಇದನ್ನೂ ಓದಿ- Dr K Sudhakar: 'ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಇಲ್ಲ; ಆದ್ರೆ ಜನರು ಎಚ್ಚರದಿಂದಿರಬೇಕು'


ಕರ್ನಾಟಕದಲ್ಲಿ ಬ್ರೆಜಿಲ್ ಅಥವಾ ದಕ್ಷಿಣ ಆಫ್ರಿಕಾ ರೂಪಾಂತರಿ ವೈರಸ್ ಇಲ್ಲ
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಆರೋಗ್ಯ ಸಚಿವರು, ಕೇರಳದಲ್ಲಿ(Kerala) ಪ್ರತಿ ದಿನ ಸರಾಸರಿ 4000-5000 ಹಾಗೂ ಮಹಾರಾಷ್ಟ್ರದಲ್ಲಿ 5000-6000 ಪ್ರಕರಣಗಳು ಬೆಳಕಿಗೆ ಬರುತ್ತಿವೆ ಹಾಗೂ ಈ ರಾಜ್ಯಗಳ ಗಡಿಗಳು ಕರ್ನಾಟಕಕ್ಕೇ ಹೊಂದಿಕೊಂಡಿವೆ. ಹೀಗಾಗಿ ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾ ವೈರಸ್ ನ ಬ್ರೆಜಿಲ್ ಅಥವಾ ದಕ್ಷಿಣ ಆಫ್ರಿಕಾ ರೂಪಾಂತರಿ ಪತ್ತೆಯಾಗಿಲ್ಲ. ಆದರೆ, ಯುಕೆಯಿಂದ ಬೆಂಗಳೂರಿಗೆ ಬಂದಿಳಿದ ಕೆಲ ಯಾತ್ರಿಗಳಲ್ಲಿ ಯುಕೆ ರೂಪಾಂತರಿ ವೈರಸ್ ಸೊಂಕು ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ-Covid ಹೆಚ್ಚಳದ ಹಿನ್ನೆಲೆ: ಗಡಿಯಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.