ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ: ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ
ಕೊರೊನಾ 4ನೇ ಅಲೆಯ ಭೀತಿ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಬೆಂಗಳೂರು: ಕೊರೊನಾ 4ನೇ ಅಲೆ ಬರುವ ಸಾಧ‍್ಯತೆ ಇರುವುದರಿಂದ ರಾಜ್ಯ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ‍್ಯಕ್ಷತೆಯಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರದ ವೇಳೆ ಉಗುಳುವುದನ್ನು ನಿರ್ಬಂಧಿಸಿದ ಆದೇಶಿಸಲಾಗಿದೆ. ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಂಚರಿಸುವ ವೇಳೆ ಉಗುಳಿದರೆ ದಂಡ ವಿಧಿಸಲು ಸ್ಥಳೀಯ ಆಡಳಿತಕ್ಕೆ ಅಧಿಕಾರ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮಲಬಾರ್ ಗೋಲ್ಡ್ ಕಂಪನಿ ವಿರುದ್ಧ ಹಿಂದೂ ಸಂಘಟನೆ ಆಕ್ರೋಶ: ಚಿನ್ನ ಖರೀದಿಸದಂತೆ ಎಚ್ಚರಿಕೆ
ರಾಜ್ಯದಲ್ಲಿ ಫೆಬ್ರವರಿ 28ರಿಂದ ಕೋವಿಡ್-19 ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು. ಕೊರೊನಾ ಪ್ರಕರಣಗಳು ಕಡಿಮೆಯಾದ ಕಾರಣ ಸಾರ್ವಜನಿಕರಿಗೆ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿತ್ತು. ಪ್ರಸ್ತುತ ದೆಹಲಿ, ಹರಿಯಾಣ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪ್ರತಿದಿನ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಳಗೊಳ್ಳುತ್ತಿವೆ.
ಡಿ.ಕೆ.ಶಿವಕುಮಾರ್ ಅವರೇ ಪಿಎಸ್ಐ ನೇಮಕಾತಿ ಹಗರಣದ ಆರೋಪಿ: ಬಿಜೆಪಿ ಆರೋಪ
ಸಾರ್ವಜನಿಕರು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೊರೊನಾ 4ನೇ ಅಲೆಯ ಭೀತಿ ಇರುವುದರಿಂದ ಸೂಕ್ತ ಮುಂಜಾಗೃತೆ ಅತ್ಯವಶ್ಯಕವೆಂದು ಜನರಿಗೆ ಸಲಹೆ ನೀಡಲಾಗಿದೆ. ವಿದೇಶಗಳಿಂದ ರಾಜ್ಯಕ್ಕೆ ಮತ್ತು ದೇಶಕ್ಕೆ ಬರುವವರ ಮೇಲೆ ವಿಶೇಷ ನಿಗಾ ಇಡಲಾಗುತ್ತಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜನರು ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.