ಕೋವಿಡ್ ಭ್ರಷ್ಟಾಚಾರ: ಕುನ್ಹಾ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿ
ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ವೈದ್ಯಕೀಯ ಪರಿಕರಗಳ ಖರೀದಿ, ವಿತರಣೆ ಮತ್ತು ಬಳಕೆ ವಿಷಯಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಸರ್ಕಾರ ನೇಮಿಸಿದ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ನೇತೃತ್ವದ ನ್ಯಾಯಾಂಗ ಆಯೋಗ ಒಂದು ವರದಿಯನ್ನು ಸಲ್ಲಿಸಿದೆ. ಇನ್ನು ಈ ವರದಿಯನ್ನು ವಿಶ್ಲೇಷಿಸಿ ಅಧ್ಯಯನ ಮಾಡಿ ಮುಂದಿನ ಕ್ರಮಗಳ ಬಗ್ಗೆ ಅಗತ್ಯದ ಶಿಫಾರಸ್ಸುಗಳನ್ನು ಮಾಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರನ್ನೊಳಗೊಂಡ ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ.
ಇದನ್ನೂ ಓದಿ: ಶೂಟಿಂಗ್ ವೇಳೆ ನನಗೂ ʼಆʼ ಅನುಭವ ಆಗಿದೆ: ಕಾಸ್ಟಿಂಗ್ ಕೌಚ್ ಬಗ್ಗೆ ನಟಿ ರಾಧಿಕಾ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ ವೈರಲ್!
ಈ ಬಗ್ಗೆ ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಮಾಹಿತಿ ನೀಡಿದ್ದಾರೆ.
ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಅವರು ಕೋವಿಡ್ ಚಿಕಿತ್ಸೆಯ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ನ್ಯಾಯಾಂಗ ಆಯೋಗ ವರದಿ ಸಲ್ಲಿಸಿದೆ ಎಂದು ತಿಳಿಸಿದರು.
ತಾವು ಮತ್ತು ರಾಮಲಿಂಗಾ ರೆಡ್ಡಿಯವರು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕೋವಿಡ್ ಭ್ರಷ್ಟಾಚಾರದ ಕುರಿತು ವಿವರವಾದ ವರದಿಯನ್ನು ವಿಧಾನ ಮಂಡಲಕ್ಕೆ ಸಲ್ಲಿಸಲಾಗಿತ್ತು. ಆದರೆ ಬಿಜೆಪಿ ಆಡಳಿತಾವಧಿಯಲ್ಲಿ ಅಂದಿನ ಸಭಾಧ್ಯಕ್ಷರು ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಲಿಲ್ಲ ಎಂದು ತಿಳಿಸಿದರು.
ಕೋವಿಡ್ ಪರಿಕರಗಳ ಖರೀದಿಯಲ್ಲಿ ಬಹು ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿತ್ತು. ಈ ವರದಿಯ ನಂತರ ಮೈಕೆಲ್ ಡಿ. ಕುನ್ಹಾ ನೇತೃತ್ವದ ಆಧಾರದ ಮೇಲೆ ನ್ಯಾಯಾಂಗ ಆಯೋಗ ರಚನೆಯಾಗಿತ್ತು. ಈ ಆಯೋಗ 7 ಸಂಪುಟದಲ್ಲಿ ವರದಿ ಸಲ್ಲಿಸಿದೆ. ನೂರಾರು ಕೋಟಿ ರೂಪಾಯಿಗಳ ಭ್ರಷ್ಠಾಚಾರ, ಸರ್ಕಾರಿ ಕಡತಗಳ ಕಾಣೆಯಾಗುವಿಕೆ ಬಹು ಪ್ರಮುಖವಾದ ಅಂಶವಾಗಿದೆ ಎಂದು ಸಚಿವರು ವಿವರಿಸಿದರು.
ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ರಶ್ಮಿಕಾ ಮಂದಣ್ಣ ಬೆಸ್ಟ್ ಫ್ರೆಂಡ್ ಆಗಮನ: ಫಸ್ಟ್ ಟೈಂ ಅಲ್ಲ.... 2ನೇ ಸಲ
ಮುಡಾ ಹಗರಣದ ನಂತರ ಕೋವಿಡ್ ಭ್ರಷ್ಟಾಚಾರವನ್ನು ಪ್ರಸ್ತಾಪಿಸುತ್ತಿರುವುದು ಪ್ರತಿಕಾರದ ಕ್ರಮವಲ್ಲವೇ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಡಾ ಎಂಬ ಹೆಸರಿನ ಹಗರಣವಲ್ಲದಿದ್ದರೂ ಪ್ರಸ್ತಾಪವಾಗಿ ಕೇವಲ ಎರಡು ತಿಂಗಳು ಗತಿಸಿದೆ. ಆದರೆ ಕೊವೀಡ್ ಭ್ರಷ್ಟಾಚಾರ ಕುರಿತು ನ್ಯಾಯಾಂಗ ಆಯೋಗ ರಚನೆಯಾಗಿ ಒಂದು ವರ್ಷ ಕಳೆದಿದೆ. ಪ್ರತಿಕಾರದ ಕ್ರಮ ಎಲ್ಲಿಂದ ಬಂತು ಎಂದು ಮರು ಪ್ರಶ್ನೆ ಮಾಡಿದರು. ಕೊವೀಡ್ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ಆಯೋಗದ ವರದಿ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ