Covid Relief Package : ರಾಜ್ಯದ ಖಾಸಗಿ ಶಾಲಾ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್!

ಶಾಲಾ-ಕಾಲೇಜುಗಳನ್ನ ಬಂದ್ ಮಾಡಲಾಗಿದೆ. ಇದರಿಂದಾಗಿ ಶಾಲಾ-ಕಾಲೇಜು ಶಿಕ್ಷಕರು, ಉಪನ್ಯಾಸಕರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದಾರೆ

Last Updated : Jun 1, 2021, 10:43 AM IST
  • ಪ್ರಸ್ತುತ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ
  • ಶಾಲಾ-ಕಾಲೇಜು ಶಿಕ್ಷಕರು, ಉಪನ್ಯಾಸಕರು ಆರ್ಥಿಕ ಸಂಕಷ್ಟ
  • ಖಾಸಗಿ ಶಾಲಾ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್
Covid Relief Package : ರಾಜ್ಯದ ಖಾಸಗಿ ಶಾಲಾ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್! title=

ಬೆಂಗಳೂರು : ಪ್ರಸ್ತುತ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ಶಾಲಾ-ಕಾಲೇಜುಗಳನ್ನ ಬಂದ್ ಮಾಡಲಾಗಿದೆ. ಇದರಿಂದಾಗಿ ಶಾಲಾ-ಕಾಲೇಜು ಶಿಕ್ಷಕರು, ಉಪನ್ಯಾಸಕರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದಾರೆ. ಹೀಗಾಗಿ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲಾ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡಲಿದೆ ಎನ್ನಲಾಗುತ್ತಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಶಾಲಾ-ಕಾಲೇಜು(School-College)ಗಳು ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವಂತ ಶಿಕ್ಷಕರು, ಉಪನ್ಯಾಸಕರಿಗೆ SSLC, ದ್ವಿತೀಯ PUC ಹಾಗೂ IET ಅಭ್ಯರ್ಥಿಗಳ ಪರೀಕ್ಷಾ ಶುಲ್ಕವನ್ನು ಬಳಸಿಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ : Heavy Rainfall : ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ..!

ಇದಷ್ಟೇ ಅಲ್ಲದೇ ಶಿಕ್ಷಕರ ಕಲ್ಯಾಣ ನಿಧಿ, SSLC ಪರೀಕ್ಷಾ ಮಂಡಳಿ, ಪಿಯು ಇಲಾಖೆಗೆ ನೀಡಿರುವ ಅನುದಾನದಿಂದ ಬಾಕಿ ಉಳಿದ ಹಣವನ್ನು ಬಳಸಿಕೊಂಡು, ವಿಶೇಷ ಪ್ಯಾಕೇಜ್(Special Package) ಮೂಲಕ, ಸಂಕಷ್ಟದಲ್ಲಿರುವಂತ ಅನುದಾನಿತ ಶಾಲೆಗಳ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ನೀಡಲಿದೆ ಎನ್ನಲಾಗಿದೆ. ಆ ಬಗ್ಗೆ ಸದ್ಯದಲ್ಲಿಯೇ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಹೊರ ಬೀಳಲಿದೆ.

ಇದನ್ನೂ ಓದಿ : DK Shivakumar : ಹುಬ್ಬಳ್ಳಿ-ಧಾರಾವಾಡ ರೈತರೊಂದಿಗೆ ಸಂವಾದ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News