CP Yogeshwar: ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಎಂದ ಸಿಪಿ ಯೋಗೇಶ್ವರ್‌

ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತಾ ಗೊತ್ತಿದೆ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ.  

Written by - Puttaraj K Alur | Last Updated : Aug 12, 2024, 06:15 PM IST
  • ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ
  • ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ
  • ನಾನು ಪಕ್ಷೇತರನಾಗಿ ಮತ್ತೆ ಗೆದ್ದು NDA ಭಾಗವಾಗುತ್ತೇನೆ ಎಂದ ಸಿಪಿ ಯೋಗೇಶ್ವರ್
CP Yogeshwar: ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಎಂದ ಸಿಪಿ ಯೋಗೇಶ್ವರ್‌ title=
ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ!

ಬೆಂಗಳೂರು: ಚನ್ನಪಟ್ಟಣ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆಂದು ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಹೇಳಿದ್ದಾರೆ. ಉಪಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ʼನಾನು ಪಕ್ಷೇತರನಾಗಿ ಮತ್ತೆ ಗೆದ್ದು NDA ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣʼ ಅಂತಾ ತಿಳಿಸಿದರು.  

ನನ್ನ ತಾಲೂಕಿನ ಜನರು ನನ್ನ ಮೇಲೆ ವಿಶ್ವಾಸವನ್ನು ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ನನ್ನನ್ನು ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ: ಇಂದು ಎರಡನೇ ದಿನವೂ ನದಿಗೆ ನೀರು ಬಿಡುಗಡೆ

ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತಾ ಗೊತ್ತಿದೆ ಎಂದು ಹೇಳಿದರು.  

ನನಗೂ ಎಚ್‌.ಡಿ.ಕುಮಾರಸ್ವಾಮಿಯವರಿಗೂ ಭಿನ್ನಾಭಿಪ್ರಾಯ ಏನಿದೆ? ನಮ್ಮ ಮಧ್ಯೆ ಬಿರುಕು ಮೂಡಿಸುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಮನಸ್ಸು ಬದಲಾಯಿಸಬಹುದು. ಕುಮಾರಸ್ವಾಮಿ ಒಪ್ಪದಿದ್ದರೆ ಮುಂದಿನ ದಾರಿ ನೋಡೋಣʼ ಅಂತಾ ಇದೇ ವೇಳೆ ಯೋಗೇಶ್ವರ್‌ ತಿಳಿಸಿದರು. 

ಇದನ್ನೂ ಓದಿಘಟಪ್ರಭಾ ನದಿಯಿಂದ ಪ್ರವಾಹ: ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News