Nikhil Kumaraswamy: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿದತ್ತು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್‌ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.


COMMERCIAL BREAK
SCROLL TO CONTINUE READING

ಇತ್ತೀಚೆಗಷ್ಟೆ ಬಿಜೆಪಿ ಪಕ್ಷವನ್ನು ತೊರೆದು ಸಿ.ಪಿ. ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷವನ್ನು ಸೇರಿಕೊಂಡಿದ್ದರು. ನಿಖಿಲ್‌  ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ ಪಕ್ಷದ ಪರ ಚುನಾವಣೆಗೆ ನಿಂತಿದ್ದ ಯೋಗೇಶ್ವರ್‌ ಇದೀಗ ವಿಧಾನಸಭಾ ಉಪಚುಣಾವಣೆಯಲ್ಲಿ ಗೆದ್ದು ಬೀಗಿದ್ದಾರೆ. 


ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಿ.ಪಿ ಯೋಗೇಶ್ವರ್‌ ವಿರುದ್ದ ಸ್ಫರ್ಧಿಸಿದ್ದ ನಿಖಿಲ್‌ ಕುಮಾರಸ್ವಾಮಿ ಇದೀಗ ಸೋಲುಂಡಿದ್ದಾರೆ, ಬಿಜೆಪಿ ಪಕ್ಷದಿಂದ ಹೊರಬಂದು ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡಿದ್ದ ಸಿ.ಪಿ. ಯೋಗೇಶ್ವರ್‌ ಚೆನ್ನಪಟ್ಟಣದಲ್ಲಿ ಗೆಲ್ಲುವುದು ಕಷ್ಟ ಎಂದು ಹೇಲಲಾಗುತ್ತಿತ್ತು, ನಿಖಿಲ್‌ ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಗೆಲ್ಲುತ್ತಾರೆ ಎನ್ನುವ ನಿರೀಕ್ಷೆ ಎಲ್ಲರಲ್ಲೂ ಹೆಚ್ಚಾಗಿಯೇ ಇತ್ತು. ಆದರೆ ಈ ನಿರೀಕ್ಷೆ ಇದೀಗ ಹುಸಿಯಾಗಿದೆ. 


ನಿಖಿಲ್‌ ಕುಮಾರಸ್ವಾಮಿ ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುತ್ತಾರೆ ಎನ್ನುವ ಸುದ್ದಿ ಸಿಕ್ಕಪಟ್ಟೆ ಸದ್ದು ಮಾಡೊತ್ತು, ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಚುನಾವಣೆ ಫಲಿತಾಂಶ ಹೊರಬರುವ ಮುಂಚೆಯೇ ನಿಖಿಲ್‌ ಕುಮಾರಸ್ವಾಮಿ ಅವರೆ ಈ ಕ್ಷೇತ್ರದಲ್ಲಿ ಗೆಲ್ಲುತ್ತಾರೆ ಎನ್ನುವ ನಿರೀಕ್ಷೆಯಿಂದ ಸಂಭ್ರಮವನ್ನು ಆಚರಿಸಿದ್ದರು, ಆದರೆ ಇದೀಗ ಈ ನಿರೀಕ್ಷೆ ತಪ್ಪಾಗಿದೆ. ನಿಖಿಲ್‌ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್‌ ಮುನ್ನಡೆ ಸಾಧಿಸಿದ್ದು ಗೆಲುವಿನ ನಗೆ ಬೀರಿದ್ದಾರೆ. 


ಇದೀಗ ಈ ಸೋಲಿನೊಂದಿಗೆ ನಿಖಿಲ್‌ ಕುಮಾರಸ್ವಾಮಿ ಮೂರನೆ ಭಾರಿಗೆ ಹೀನಾಯ ಸೋಲು ಅನುಭಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್  ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.