ಕರ್ನಾಟಕದ ಹಲವು ಅಣೆಕಟ್ಟೆಗಳಲ್ಲಿ ಬಿರುಕು! ಕಾದಿದೆಯೇ ಭಾರೀ ಅನಾಹುತ?

ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರುತ್ತಿದ್ದು, ನೀರಿನ ಒತ್ತಡ ಹೆಚ್ಚಾಗಿರುವ ಕಾರಣ ಅಲ್ಲಲ್ಲಿ ಬಿರುಕು ಕಂಡುಬಂದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

Last Updated : Aug 18, 2018, 01:21 PM IST
ಕರ್ನಾಟಕದ ಹಲವು ಅಣೆಕಟ್ಟೆಗಳಲ್ಲಿ ಬಿರುಕು! ಕಾದಿದೆಯೇ ಭಾರೀ ಅನಾಹುತ? title=

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರುತ್ತಿದ್ದು, ನೀರಿನ ಒತ್ತಡ ಹೆಚ್ಚಾಗಿರುವ ಕಾರಣ ಅಲ್ಲಲ್ಲಿ ಬಿರುಕು ಕಂಡುಬಂದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಅಣೆಕಟ್ಟುಗಳು ಗರಿಷ್ಠ ಮಟ್ಟ ತಲುಪುತ್ತಿದ್ದು, ಕೃಷ್ಣರಾಜಸಾಗರ, ಕಬಿನಿ ಹಾಗೂ ತುಂಗಭದ್ರಾ ಜಲಾಶಯಗಳಲ್ಲಿ ಒಳಹರಿವು ಹೆಚಾಗಿದೆ. ಹೀಗಾಗಿ ಜಲಾಶಯಗಳಲ್ಲಿ ನೀರಿನ ಒತ್ತಡದಿಂದಾಗಿ ಸಣ್ಣಪುಟ್ಟ ಬಿರುಕುಗಳು ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು.

ಉಳಿದಂತೆ ಕೊಡಗಿನಲ್ಲಿ ಪ್ರವಾಹ ಸಂತ್ರಸ್ಥರಿಗಾಗಿ ಊಟ, ಬಟ್ಟೆ, ಕುಡಿಯಲು ನೀರು, ಔಷಧಿಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ರಾಮನಗರದ ಉದ್ಯಮಿಗಳು ಮತ್ತು ಗಾರ್ಮೆಂಟ್ಸ್ ಮಾಲಿಕರಿಗೆ ಸಂತ್ರಸ್ತರಿಗೆ ಅಗತ್ಯವಾದ ಬಟ್ಟೆಗಳು ಮತ್ತು ಹಣಕಾಸಿನ ನೆರವು ಒದಗಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು. 

Trending News