ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: 5 ವರ್ಷದ ಮಗನನ್ನು ಕೊಂದು ನೇಣಿಗೆ ಶರಣಾದ ತಾಯಿ

36 ವರ್ಷದ ರೋಹಿಣಿ ಗೃಹಿಣಿಯಾಗಿದ್ದು, ಪತಿ‌ ಪ್ರವೀಣ್ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

Written by - VISHWANATH HARIHARA | Edited by - Puttaraj K Alur | Last Updated : Apr 20, 2022, 05:51 PM IST
  • ಮಂಗಳೂರು ಮೂಲದ ರೋಹಿಣಿ ಶೆಟ್ಟಿ & ಸಿಯಾನ್ ಶೆಟ್ಟಿ ಮೃತಪಟ್ಟ ತಾಯಿ-ಮಗ
  • ಏ.17ರಂದೇ ಈ ದುರ್ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ
  • ಹುಳಿಮಾವು‌ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಪುರ ಬಾಡಿಗೆ ಮನೆಯೊಂದರಲ್ಲಿ ಕುಟುಂಬ ವಾಸವಾಗಿತ್ತು
ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: 5 ವರ್ಷದ ಮಗನನ್ನು ಕೊಂದು ನೇಣಿಗೆ ಶರಣಾದ ತಾಯಿ    title=
ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ

ಬೆಂಗಳೂರು: 5 ವರ್ಷದ ಮಗನನ್ನು ನೇಣು ಬಿಗಿದು ಕೊಂದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ ಸಿಯಾನ್ ಶೆಟ್ಟಿ ಮೃತಪಟ್ಟ ತಾಯಿ-ಮಗ. ಏ.17ರಂದು ಈ ದುರ್ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬವು ಹುಳಿಮಾವು‌ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಪುರ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿತ್ತು.

ಇದನ್ನೂ ಓದಿ: ಸ್ಕೂಟರ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು

36 ವರ್ಷದ ರೋಹಿಣಿ ಗೃಹಿಣಿಯಾಗಿದ್ದು, ಪತಿ‌ ಪ್ರವೀಣ್ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ರೋಹಿಣಿ ತಾಯಿ 12 ವರ್ಷಗಳ ಹಿಂದೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಆಗಿನಿಂದಲೂ ರೋಹಿಣಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮದುವೆಯಾದ ಬಳಿಕವೂ ಎರಡ್ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು‌ ಎಂದು ತಿಳಿದುಬಂದಿದೆ.

ಏ.17ರಂದು ರಾತ್ರಿ ಊಟವಾದ ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ತಾಯಿ-ಮಗ ಮಲಗಿದ್ದರು. ಪತಿ ಪ್ರವೀಣ್ ಮತ್ತೊಂದು ಕೋಣೆಯಲ್ಲಿ ಮಲಗಿದ್ದರು. ಮರುದಿನ ಬೆಳಗ್ಗೆ ಪ್ರವೀಣ್, ಹೆಂಡತಿ-ಮಗ ಮಲಗಿದ್ದ ರೂಮಿನ ಬಾಗಿಲು ತಟ್ಟಿದ್ದಾರೆ. ಆದರೆ ಎಷ್ಟು ಹೊತ್ತಾದರೂ ರೋಹಿಣಿ ಬಾಗಿಲು ತೆರೆದಿಲ್ಲ. ತಕ್ಷಣವೇ ಸ್ಥಳೀಯರ ಸಹಾಯದಿಂದ ಬಾಗಿಲು ಮುರಿದು ನೋಡಿದಾಗ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸದ್ಯ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಪ್ರತಿಭಟನೆ ವೇಳೆ ಪಾಕ್ ಪರ ಘೋಷಣೆ ಕೂಗಿದ್ರಾ ಕಿಡಿಗೇಡಿಗಳು..!?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News