ಬೆಂಗಳೂರು: ನೀರಿನಲ್ಲಿ ಕರಗದ ಪಿಓಪಿ ವಿಗ್ರಹಗಳು ಜಲ ಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಗಣೇಶ ಚತುರ್ಥಿಯ ಹಿನ್ನೆಲೆ ಪರಿಸರ ಸ್ನೇಹಿ ಗಣಪತಿ ಹಬ್ಬದ ಆಚರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ತಮ್ಮ ಕಚೇರಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇಂತಹ ತಯಾರಕರಿಗೆ ಮಂಡಳಿ ನೋಟಿಸ್ ನೀಡಿದರೂ ಅವರು ಮತ್ತೆ ತಯಾರಿಕೆಯಲ್ಲಿ ತೊಡಗಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಸೂಚಿಸಿದರು.  


ಪ್ರಕೃತಿ ಮತ್ತು ಪರಿಸರ ಉಳಿಸಬೇಕಾದದ್ದು ನಮ್ಮೆಲ್ಲರ ಹೊಣೆಯಾಗಿದ್ದು, ಜಲ ಮೂಲಗಳಿಗೆ ಹಾನಿಯುಂಟು ಮಾಡುವ ಭಾರ ಲೋಹ ಮತ್ತು ರಸಾಯನಿಕ ಬಣ್ಣ ಲೇಪಿತ ಪಿಓಪಿ ವಿಗ್ರಹಗಳ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ವಿಸರ್ಜನೆಯನ್ನು ತಡೆಯಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ 2020ರ ಮೇ 12ರಂದು ಮಾರ್ಗಸೂಚಿ  ಹೊರಡಿಸಿದ್ದು, ಅದಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೂಡ ಆಗಸ್ಟ್ 21ರಂದು ಸುತ್ತೋಲೆ ಹೊರಡಿಸಿ ಪಿಓಪಿ ಮತ್ತು ಭಾರ ಲೋಹ ಮಿಶ್ರಿತ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ತಯಾರಿಕೆ, ಮಾರಾಟ, ಸಾಗಾಟ ಮತ್ತು ವಿಸರ್ಜನೆಯನ್ನು ನಿಷೇಧಿಸಿದೆ. ಈಗ ಇದರ ಕಟ್ಟುನಿಟ್ಟಿನ ಪಾಲನೆ ಆಗಬೇಕು ಎಂದು ಹೇಳಿದರು.


ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್


ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ: ಜಲ ಕಾಯಿದೆ, ವಾಯು ಕಾಯಿದೆ ಮತ್ತು ಪರಿಸರ ಸಂರಕ್ಷಣಾ ಕಾಯಿದೆ 1986ರ ಅಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹೇಳಿದ ಸಚಿವ ಖಂಡ್ರೆ, ಮಂಡಳಿಯ ನೋಟಿಸ್‍ಗೂ ಹೆದರದೆ, ಬೀಗಮುದ್ರೆ ಹಾಕಿದ್ದರೂ ಹಿಂಬಾಗಿಲಿನಿಂದ ಪಿಓಪಿ ಗಣೇಶ ತಯಾರಿಕೆ, ಸಾಗಣೆ, ದಾಸ್ತಾನು ಮತ್ತು ಮಾರಾಟದಲ್ಲಿ ತೊಡಗಿರುವ ತಯಾರಕರ ವಿರುದ್ಧ ಯಾವುದೇ ಒತ್ತಡಕ್ಕೆ ಮಣಿಯದೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಖಡಕ್ ಸೂಚನೆ ನೀಡಿದರು.


ವಿಷಕಾರಿ: ಪಿಓಪಿ ಮತ್ತು ರಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಕೆರೆ, ಕಟ್ಟೆ, ನದಿ, ತೊರೆ, ಬಾವಿಗಳಲ್ಲಿ ವಿಸರ್ಜನೆ ಮಾಡಿದರೆ, ನೀರಿನಲ್ಲಿ ಸೀಸ, ನಿಕ್ಕಲ್, ಕ್ರೋಮಿಯಂನಂತಹ ಭಾರ ಲೋಹಗಳು ಕರಗುತ್ತವೆ. ಜೊತೆಗೆ ಪಿಓಪಿ ಕರಗದೆ ಹಾಗೆಯೇ ಉಳಿದು ಜಲಚರಗಳ ಸಾವಿಗೆ ಕಾರಣವಾಗುತ್ತದೆ. ಈ ನೀರು ಕುಡಿಯುವ ಜಾನುವಾರುಗಳು ಸಾವಿಗೀಡಾಗುತ್ತವೆ. ಜನರೂ ಕಾಯಿಲೆ ಬೀಳುತ್ತಾರೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಸಮುದಾಯದ ಆರೋಗ್ಯ ರಕ್ಷಣೆಗೆ ಪಿಓಪಿ ಗಣೇಶ ಮಾರಾಟ, ತಯಾರಿಕೆ, ವಿಸರ್ಜನೆ ನಿಷೇಧಿಸುವುದು ಅನಿವಾರ್ಯ ಎಂದು ಹೇಳಿದರು. ಕೂಡಲೇ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯದಾದ್ಯಂತ ಪಿಓಪಿ ಗಣೇಶ ಮಾರಾಟ ನಿರ್ಬಂಧಿಸುವಂತೆ ಆದೇಶ ನೀಡಿದರು.


ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಮೇಲೆ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲು


ಪಿಓಪಿ ಗಣಪ ತ್ಯಜಿಸಿ, ಪರಿಸರ ಸ್ನೇಹಿ ಗಣಪನ ಪೂಜಿಸಿ: ಜಲಚರಗಳ ಸಾವಿಗೆ ಕಾರಣವಾಗುವ, ಕೆರೆ, ಕಟ್ಟೆ, ಬಾವಿಯ ನೀರನ್ನು ಕಲುಷಿತಗೊಳಿಸುವ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತ್ಯಜಿಸಿ, ಪರಿಸರ ಸ್ನೇಹಿ ಗಣಪತಿಯನ್ನು ಪೂಜಿಸುವಂತೆ ಹಾಗೂ ಇತರರನ್ನೂ ಪರಿಸರ ಸ್ನೇಹಿ ಗಣಪನ ಪೂಜಿಸುವಂತೆ ಪ್ರೇರೇಪಿಸುವಂತೆ ಸಚಿವ ಈಶ್ವರ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.


ಗಣಪತಿ ಪರಿಸರದಿಂದ ಉದ್ಭವಿಸಿದ ದೇವರು, ನಾವು ಪರಿಸರ ಸ್ನೇಹಿ ಗಣಪನ ಪೂಜಿಸಿದರೆ ಅದು ನಿಜ ಭಕ್ತಿಯ ಸಮರ್ಪಣೆ ಆಗುತ್ತದೆ ಎಂದು ತಿಳಿಸಿದ ಅವರು, ಜೇಡಿ ಮಣ್ಣಿನಿಂದ ಅಥವಾ ಗೋಮಯದಿಂದ ತಯಾರಿಸಿದ ಗಣಪತಿಯ ಮೂರ್ತಿಗಳನ್ನು ಪೂಜಿಸಿ, ಮನೆಯಲ್ಲೇ ವಿಸರ್ಜಿಸಿ ಆ ನೀರನ್ನು ಗಿಡ, ಮರಗಳಿಗೆ ಹಾಕುವ ಮೂಕ ಪ್ರಕೃತಿ ಪರಿಸರ ಉಳಿಸುವಂತೆ ಮನವಿ ಮಾಡಿದ್ದಾರೆ.


ಯಾವುದೇ ಕಾರಣಕ್ಕೂ ನಾವು ಪರಿಸರಕ್ಕೆ ಮಾರಕವಾದಂತಹ ಬಣ್ಣ ಲೇಪಿತ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ – ಪಿಓಪಿಯಿಂದ ತಯಾರಿಸಿದ ಮೂರ್ತಿಗಳನ್ನು ಕೆರೆ, ಬಾವಿ, ನದಿ ಸೇರಿದಂತೆ ಯಾವುದೇ ಜಲ ಮೂಲದಲ್ಲಿ ವಿಸರ್ಜಿಸುದಿಲ್ಲವೆಂದು ಪ್ರತಿಜ್ಞೆ ಮಾಡೋಣ. ನಮ್ಮ ಪರಿಸರವನ್ನು ಸಂರಕ್ಷಿಸೋಣ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಕೊಡೊಣ ಎಂಬ ಸಂಕಲ್ಪ ಮಾಡೋಣವೆಂದು ಮನವಿ ಮಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.