ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿದ್ದಾರೆ. ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ.ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ.
ಇದನ್ನೂ ಓದಿ: ಯಾವ್ಯಾವ ಆಟಗಾರರು ತಮ್ಮ ಹುಟ್ಟುಹಬ್ಬದಂದು ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದಾರೆ ಗೊತ್ತಾ?
ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಆರೋಪ ಆಧಾರ ರಹಿತ ಮತ್ತು ರಾಜಕೀಯ ಹೇಳಿಕೆಯಾಗಿದೆ. 40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ. ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ. ಅದರ ಬಗ್ಗೆ ಪ್ರಧಾನಿಗಳು ಮಾತನಾಡಲಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಹುಟ್ಟುಹಬ್ಬದಂದೇ ಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ ವಿಶ್ವದಾಖಲೆ ಸರಿಗಟ್ಟಿದ ‘ಕಿಂಗ್’ ವಿರಾಟ್
ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ.ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ.ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದಿದ್ದಾರೆ. ಅವಕಾಶ ನೀಡಿದರಲ್ಲವೇ ಭೇಟಿಯಾಗೋದು? ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ