ಬಳ್ಳಾರಿ ನಗರ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ

ಬಳ್ಳಾರಿಯಲ್ಲಿ ಕಳೆದ ವಾರ ಸುರಿದ ಭಾರೀ ಮಳೆಯಿಂದಾಗಿ ಕೆಲವು ಏರಿಯಾಗಳಲ್ಲಿ ಕೃತಕ ಹೊಂಡಗಳು ಸೃಷ್ಟಿಯಾಗಿದ್ದವು. ಬಳ್ಳಾರಿಯ ಜಾಗೃತಿ ನಗರದಲ್ಲಿರುವ ಖಾಲಿ ನಿವೇಶನಗಳಲ್ಲಿಯೂ ಸಹ ನೀರು ಸಂಗ್ರಹವಾಗಿತ್ತು. ನೀರನ್ನು ತೆರವುಗೊಳಿಸುವ ವೇಳೆ ಮೊಸಳೆ ಪ್ರತ್ಯಕ್ಷವಾಗಿದೆ.  

Written by - Yashaswini V | Last Updated : Jun 9, 2022, 09:06 AM IST
  • ಬಳ್ಳಾರಿ ನಗರ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ
  • ಕಳೆದ ವಾರ ಸುರಿದ ಮಳೆಯಿಂದಾಗಿ ಕೆಲ ಏರಿಯಾದಲ್ಲಿ ಕೃತಕ ಹೊಂಡಗಳು ಸೃಷ್ಟಿ
  • ಖಾಲಿ ನಿವೇಶನಗಳಲ್ಲಿ ಸಂಗ್ರಹಗೊಂಡಿದ್ದ ಮಳೆ ನೀರಿನಲ್ಲಿ ಮೊಸಳೆ ಪ್ರತ್ಯಕ್ಷ
ಬಳ್ಳಾರಿ ನಗರ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ  title=
Crocodile in residential area

ಬಳ್ಳಾರಿ: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು ಸಾಕಷ್ಟು ಅವಾಂತರ ಸೃಷ್ಟಿಸಿತ್ತು. ಇದೀಗ ಬಳ್ಳಾರಿ ನಗರದಲ್ಲಿ ಮಳೆ ನೀರು ಸಂಗ್ರಹವಾಗಿದ್ದ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬಳ್ಳಾರಿಯಲ್ಲಿ ಕಳೆದ ವಾರ ಸುರಿದ ಭಾರೀ ಮಳೆಯಿಂದಾಗಿ ಕೆಲವು ಏರಿಯಾಗಳಲ್ಲಿ ಕೃತಕ ಹೊಂಡಗಳು ಸೃಷ್ಟಿಯಾಗಿದ್ದವು. ಬಳ್ಳಾರಿಯ ಜಾಗೃತಿ ನಗರದಲ್ಲಿರುವ ಖಾಲಿ ನಿವೇಶನಗಳಲ್ಲಿಯೂ ಸಹ ನೀರು ಸಂಗ್ರಹವಾಗಿತ್ತು. ನೀರನ್ನು ತೆರವುಗೊಳಿಸುವ ವೇಳೆ ಮೊಸಳೆ ಪ್ರತ್ಯಕ್ಷವಾಗಿದೆ.  

ಇದನ್ನೂ ಓದಿ- #ಚಡ್ಡಿರಾಮಯ್ಯನವರೇ ರಾಜ್ಯದಲ್ಲಿ ನೀವು ಸಿಎಂ ಆಗಿದ್ದಾಗ ಮಾಡಿದ್ದೇನು?: ಬಿಜೆಪಿ

ಬಳ್ಳಾರಿಯ ಜಾಗೃತಿ ನಗರದಲ್ಲಿ ಜನವಸತಿ ಪ್ರದೇಶದ ಮಧ್ಯೆ ಇರುವ ಖಾಲಿ ಜಾಗದಲ್ಲಿ ಮಳೆಯಿಂದಾಗಿ ನೀರು ಸಂಗ್ರಹವಾಗಿ ಕೆರೆ ರೀತಿಯ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಮಳೆ ನೀರಿನಲ್ಲಿ ಮೊಸಳೆ ಕಂಡ ಸ್ಥಳೀಯರು ಗಾಬರಿಗೊಂಡಿದ್ದಾರೆ.

ಇದನ್ನೂ ಓದಿ- 'ಆಹಾರ ಭದ್ರತೆ ಹಾಗೂ ಸುರಕ್ಷತೆ ಸೂಚ್ಯಂಕದಲ್ಲಿ ಕರ್ನಾಟಕ ಮತ್ತೆ ಕುಸಿತ ಆತಂಕಕಾರಿ'

ಮೊಸಳೆ ಕಂಡು ಆತಂಕಕ್ಕೆ ಒಳಗಾಗಿದ್ದ ಜನರು  ಈ ಕುರಿತಂತೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News