ನವದೆಹಲಿ: ರೈತರು ಮತ್ತು ಖಾಸಗಿ ನಿವಾಸಿಗಳು ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡಿರುವ ಮಾಹಿತಿ ನೋಡಲು ಬೆಳೆ ದರ್ಶಕ್ 2020-21 ಆ್ಯಪ್ ಸರ್ಕಾರ ಬಿಡುಗಡೆ ಮಾಡಿದೆ.ಆ್ಯಪ್‍ನಲ್ಲಿ ರೈತರು ಅಪ್‍ಲೋಡ್ ಮಾಡಿರುವ ಜಮೀನಿನ ವಿವರದ ನಿಖರತೆ ಖಚಿತ ಪಡಿಸಿಕೊಳ್ಳಬಹುದು.


COMMERCIAL BREAK
SCROLL TO CONTINUE READING

ಒಂದು ವೇಳೆ ಮಾಹಿತಿಯನ್ನು ತಪ್ಪಾಗಿ ದಾಖಲಿಸಿದ್ದರೆ ಅಕ್ಟೋಬರ್ 15 ರೊಳಗೆ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಲು ಆ್ಯಪ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ.ರೈತರು ಆ್ಯಪ್‍ನ್ನು ಗೂಗಲ್‍ ಪ್ಲೇಸ್ಟೋರ್‍ನಲ್ಲಿ https:http://play.google.com/store/apps/details...ಲಿಂಕ್ ಬಳಸಿ ಡೌನ್‍ಲೋಡ್ ಮಾಡಿಕೊಳ್ಳಬಹುದು.


ರೈತರೇ ಸ್ವಯಂ ದಾಖಲಿಸುವ ಬೆಳೆ ಸಮೀಕ್ಷೆಯ ನೂತನ ಯೋಜನೆ ಇಲ್ಲಿದೆ ..!


ಬೆಳೆ ದರ್ಶಕ್ ಆ್ಯಪ್‍ನಿಂದ ರೈತರ ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ ಛಾಯಾಚಿತ್ರಗಳನ್ನು ವೀಕ್ಷಿಸಬಹುದು.ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ,ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ಅಂಗೀಕರಿಸಿರುವ ಮಾಹಿತಿ ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದಲ್ಲಿ ರೈತರು ಆಕ್ಷೇಪಣೆ ಸಲ್ಲಿಸಬಹುದು.


ರೈತರು ಸಲ್ಲಿಸಿರುವ ಆಕ್ಷೇಪಣೆ, ಸರ್ಕಾರಿ ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮದ ಮಾಹಿತಿ ತಿಳಿಯಬಹುದು.ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ನಷ್ಟ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುತ್ತಿರುವುದರಿಂದ ಬೆಳೆ ದರ್ಶಕ್ 2020-21 ಆ್ಯಪ್‍ನ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐ.ಬಿಜಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.