ಕರಾವಳಿ ನಿಯಂತ್ರಣ ವಲಯದ(ಸಿಆರ್‌ಝೆಡ್) 2019ರ ಪ್ರಸ್ತಾವನೆಗೆ ಅನುಮೋದನೆ ಪಡೆದ ದೇಶದ ಎರಡನೇ ಹಾಗೂ ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಈ ಪ್ರದೇಶಗಳಲ್ಲಿ ಇನ್ಮುಂದೆ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳಲು ಹೆಚ್ಚಿನ ಅವಕಾಶಗಳು ದೊರೆತಂತಾಗಿದೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದರು.


COMMERCIAL BREAK
SCROLL TO CONTINUE READING

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಕ್ವೆಂಟ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಸರ್ಕಾರದ ನಿರಂತರ ಪ್ರಯತ್ನದಿಂದಾಗಿ ಸಿಆರ್‌ಝೆಡ್ 2019ರ ಅಧಿಸೂಚನೆ ಅನುಷ್ಠಾನಕ್ಕೆ ಅವಶ್ಯವಿದ್ದ ಕರಾವಳಿ ವಲಯ ನಿರ್ವಹಣಾ ಯೋಜನೆಗೆ ತ್ವರಿತಗತಿಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ.ಈ ಯೋಜನೆ ಅನುಷ್ಠಾನದಿಂದ ಇನ್ನು ಮುಂದೆ ರಾಜ್ಯದಲ್ಲಿ ಸಮುದ್ರ ತೀರ ಪ್ರದೇಶದ ಪ್ರವಾಸಿ, ವಾಣಿಜ್ಯೋದ್ಯಮದ ಚಟುವಟಿಕೆಗಳು ಗರಿಗೆದರಲಿವೆ.


ಕೋವಿಡ್ ಪಿಡುಗು ನಮ್ಮ ಪ್ರವಾಸೋದ್ಯಮ ವಲಯಕ್ಕೆ ಮಾರಣಾಂತಿಕ ಹೊಡೆತವನ್ನು ವಿಶ್ವದಾದ್ಯಂತ ನೀಡಿತ್ತು, ಇದಕ್ಕೆ ನಮ್ಮ ರಾಜ್ಯ ಕೂಡ ಹೊರತಲ್ಲ. ಆದರೂ, ನಮ್ಮ ರಾಜ್ಯದಲ್ಲಿ ಪ್ರವಾಸೋದ್ಯಮ ವಲಯವು ತೀವ್ರಗತಿಯಲ್ಲಿ ಚೇತರಿಕೆ ಕಂಡಿದೆ. ಈ ನಿಟ್ಟಿನಲ್ಲಿ ‘ಪ್ರವಾಸೋದ್ಯಮ ಪುನರಾವಲೋಕನ’ ಎಂಬ ಈ ವರ್ಷದ ಸಂದೇಶವು ಸಂದರ್ಬೋಚಿತವು ಮತ್ತುಸಮ ಯೋಚಿತವು ಆಗಿದೆ ಎಂದರು.


ಇದನ್ನೂ ಓದಿ- Ration Card: ಉಚಿತ ಪಡಿತರ ಪ್ರಯೋಜನಗಳನ್ನು ಪಡೆಯಲು ಈ ಹೊಸ ನಿಯಮಗಳನ್ನು ತಪ್ಪದೇ ತಿಳಿಯಿರಿ


ಕರ್ನಾಟಕ ಪ್ರವಾಸೋದ್ಯಮನೀತಿ (ಪರಿಷ್ಕೃತ), 2020-26 ಅನ್ನು ಬಿಡುಗಡೆ ಮಾಡಲಾಗಿದ್ದು, ಆದ್ಯತೆಯ ಮೇರೆಗೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವುದಕ್ಕಾಗಿ 17 ಜಿಲ್ಲೆಗಳನ್ನು ಹಾಗೂ ಇತರೆ ಪ್ರಮುಖ ಪ್ರವಾಸಿತಾಣಗಳನ್ನು ‘ಆದ್ಯತಾ ಪ್ರವಾಸೋದ್ಯಮ ತಾಣಗಳು’ ( Focussed Tourism Destinations) ಎಂದು ಗುರುತಿಸಿದ್ದು, ಇದರಿಂದಾಗಿ ಹೆಚ್ಚಿನ ಬಂಡವಾಳ ಹೂಡಿಕೆಯಾಗಲಿದ್ದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಲಿವೆ.


ಕೇಂದ್ರ ಸರ್ಕಾರದ ಸ್ವದೇಶ ದರ್ಶನ 2.೦ ಅಡಿ ರಾಜ್ಯದ ಐದು  ಪ್ರವಾಸಿ ತಾಣಗಳನ್ನು ಅಂದಾಜು ರೂ.5೦೦ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಕೇಂದ್ರ ಸರ್ಕಾರದಪರ್ವತ ಮಾಲಾ ಯೋಜನೆಯಡಿ ರಾಜ್ಯದ 15 ಪ್ರವಾಸಿ ತಾಣಗಳಲ್ಲಿ ರೋಪ್ ವೇ ಅಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಂದಿಬೆಟ್ಟ ಮತ್ತು ಅಂಜನಾದ್ರಿಯಲ್ಲಿರೋಪ್-ವೇ ಅಭಿವೃದ್ದಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.


ಇದನ್ನೂ ಓದಿ: ಮನೆಯಲ್ಲಿಯೇ ಪೇಪರ್‌ Recycling :ಪರಿಸರ ಕಾಳಜಿ ಹೊಂದಿರುವ ಆರ್ಕಿಡ್ಸ್‌ಶಾಲಾ ವಿದ್ಯಾರ್ಥಿ ಕರಣ್‌


ಇದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆ ಕ್ಯಾರಾವ್ಯಾನ್ ವಾಹನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ, ಕೆಎಸ್‌ಟಿಡಿಸಿ ಅಧ್ಯಕ್ಷ ಕಾ.ಪು.ಸಿದ್ಧಲಿಂಗಸ್ವಾಮಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ನಿರ್ದೇಶಕ ವೆಂಕಟೇಶ್, ಜೆಎಲ್‌ಆರ್ ಎಂಡಿ ಮನೋಜ್ ಕುಮಾರ್, ಕೆಎಸ್‌ಟಿಡಿಸಿ ಎಂಡಿ ಜಗದೀಶ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.