MLA Oath Ceremony: ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿತ್ತು. ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಅನೇಕ ಸದಸ್ಯರು ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು. 


COMMERCIAL BREAK
SCROLL TO CONTINUE READING

ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿಯವರು ಪ್ರಮಾಣ ವಚನ ಬೋಧಿಸಿದರು. ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಕೇಸರಿ ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರು ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ನಮಸ್ಕರಿಸಿದರು. ಈ ವೇಳೆ ಸಿಟಿ ರವಿಯವರ ಕಿವಿ ಹಿಂಡಿದ ಸಿದ್ದರಾಮಯ್ಯನವರು ಬೆನ್ನು ತಟ್ಟಿ ಅಭಿನಂದಿಸಿದರು.


ಇದನ್ನೂ ಓದಿ: 11 ದಿನ ಕಸ್ಟಡಿಯಲ್ಲಿದ್ರೂ ದರ್ಶನ್‌ ದೇಹದ ತೂಕದಲ್ಲಿ ವ್ಯತ್ಯಾಸವಿಲ್ಲ


ಇದೇ ಸಂದರ್ಭದಲ್ಲಿ ಭಾರತ ಮಾತೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಪರಿಷತ್ ಸದಸ್ಯ ಎನ್.ರವಿಕುಮಾರ್‌ ಸಹ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಇದಲ್ಲದೆ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್‌ ಸದಸ್ಯ ಭೋಜೇಗೌಡರೂ ಸಹ ಸಿಎಂ ಸಿದ್ದರಾಮಯ್ಯರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು.


ರೇಣುಕಾಸ್ವಾಮಿ ಹತ್ಯೆ ಪ್ರಕರಣ : 139 ವಸ್ತುಗಳು ಖಾಕಿ ವಶಕ್ಕೆ


ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌.ಕೆ.ಪಾಟೀಲ್ ಸೇರಿದರಂತೆ ರಾಜಕೀಯ ಗಣ್ಯರು ಭಾಗಿಯಾಗಿದ್ದರು. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ 11 ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ಇದೇ ವೇಳೆ ನಡೆಯಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.