ಮಧ್ಯಂತರ ಚುನಾವಣೆ ಹೇಳಿಕೆ: ಸಿದ್ದರಾಮಯ್ಯಗೆ ಸಿ.ಟಿ. ರವಿ ತಿರುಗೇಟು

ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಯಾರೆಂದು ಇನ್ನೂ ನಿರ್ಧಾರವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲೆಳೆದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ.

Last Updated : Aug 28, 2019, 03:36 PM IST
ಮಧ್ಯಂತರ ಚುನಾವಣೆ ಹೇಳಿಕೆ: ಸಿದ್ದರಾಮಯ್ಯಗೆ ಸಿ.ಟಿ. ರವಿ ತಿರುಗೇಟು  title=

ಬೆಂಗಳೂರು: ಯಾವ ಕ್ಷಣದಲ್ಲಾದರೂ ಮಧ್ಯಂತರ ಚುನಾವಣೆ ಬರಬಹುದು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದು, ನಮ್ಮ ಸರ್ಕಾರ ಇನ್ನೂ 3 ವರ್ಷ 9 ತಿಂಗಳು ಯಾವುದೇ ತೊಂದರೆಯಿಲ್ಲದೆ ನಡೆಯುತ್ತದೆ. ಸಿದ್ದರಾಮಯ್ಯ ಭವಿಷ್ಯ ನುದಿಯುವುದನ್ನು ಯಾವಾಗ ಅಭ್ಯಾಸ ಮಾಡಿಕೊಂಡರು ಎಂದು ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಿ.ಟಿ. ರವಿ, ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಪ್ರಶ್ನಾತೀತ ನಾಯಕ ಎಂದು ಕೊಂಡಿದ್ದೆವು. ಆದರೆ ಅವರಿನ್ನು ವಿರೋಧ ಪಕ್ಷದ ನಾಯಕ ಯಾರೆಂದು ನಿರ್ಧರಿಸಿಯೇ ಇಲ್ಲ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರನ್ನು ಕಾಲೆಳೆಯುವವರು ಸಾಕಷ್ಟು ಮಂದಿ ಇದ್ದಾರೆ ಎಂದರು.

ಇದೇ ವೇಳೆ ಯಡಿಯೂರಪ್ಪನವರೇ, ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ? ಎಂಬ ಸಿದ್ದರಾಮಯ್ಯ ಪ್ರಶ್ನೆಗೂ ತಿರುಗೇಟು ನೀಡಿದ ಸಿ.ಟಿ. ರವಿ, ನಮ್ಮ ಸರ್ಕಾರ ಟೇಕಾಫ್ ಆಗಿದೆ. ನಮ್ಮ ಸರ್ಕಾರ ಕಾರ್ಯಾರಂಭ ಮಾಡಿ ತಿಂಗಳಾಗಿದೆ. ಸಿದ್ದರಾಮಯ್ಯ ಮೊದಲು ತಮ್ಮ ಕಾಲು ಯಾರೂ ಎಳೆಯದಂತೆ ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.

Trending News