ಬೆಂಗಳೂರು : ನೆರೆಯ ಕೇರಳ ರಾಜ್ಯದ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ, ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು, ಆದ್ಯ ಗಮನ ನೀಡಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಸಭೆಗೆ ತಿಳಿಸಿದರು.
ಇದನ್ನೂ ಓದಿ : Bangalore Floods: ರಾಜಕಾಲುವೆ ಸಮಸ್ಯೆ ಯಾವಾಗ ಸರಿ ಮಾಡುತ್ತೀರಿ? : ಶಾಸಕ ಕೃಷ್ಣೆಬೈರೇಗೌಡ ಪ್ರಶ್ನೆ
ಸಚಿವರು, ಇಂದು, ಸದನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ, ಬಿಜೆಪಿ ಸದಸ್ಯ, ಶ್ರೀ ಅಪ್ಪಚ್ಚು ರಂಜನ್ ಅವರ, ಪ್ರಶ್ನೆಗಳಿಗೆ ಉತ್ತರಿಸಿದ, ಸಚಿವರು, ಅಪರಾಧಿಗಳ ಮೇಲೆ ಕಣ್ಗಾವಲು ಇಡಲು, ಸೂಕ್ಷ್ಮ ಪ್ರದೇಶಗಳಲ್ಲಿ, ಸಿಸಿ ಕ್ಯಾಮರಾ ಗಳನ್ನು ಆಳವಡಿಸುವ ಬಗ್ಗೆ ಪರೀಶಿಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ ೨೦೨೧ ರಲ್ಲಿ ಒಟ್ಟು ೧೬೮೪ ಅಪರಾಧ ಪ್ರಕರಣಗಳು ದಾಖಲಾಗಿದ್ದು, ೧೬೧೭ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಹಾಗೂ ೨೦೨೨ ಆಗಸ್ಟ್ ತಿಂಗಳ ಅಂತ್ಯದ ವರೆಗೆ ಒಟ್ಟು ೧೧೨೨ ಪ್ರಕರಣಗಳು ವರದಿಯಾಗಿವೆ ಹಾಗೂ ೮೭೦ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಸದನಕ್ಕೆ ತಿಳಿಸಿದರು. ಕಾಂಗ್ರೆಸ್ ಸದಸ್ಯ ಯು ಟಿ ಖಾದರ್ ಅವರೂ ಈ ವಿಷಯದ ಬಗ್ಗೆ ಮಾತನಾಡಿದರು.
ಇದನ್ನೂ ಓದಿ : ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಕರ್ನಾಟಕದ ಬಂಡವಾಳ ಹೂಡಿಕೆ ಬಗ್ಗೆ ಸಚಿವ ನಿರಾಣಿ ಮಾತು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.