ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!
Cyclone Fengal Effect: ಫೆಂಗಲ್ ಚಂಡಮಾರುತ ಪ್ರಭಾವದಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪ್ರಭಾವದಿಂದಾಗಿ ಕೆಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Heavy Rain in Karnataka School Colleges Holiday: ಇಂದು ಬೆಳ್ಳಂಬೆಳಿಗ್ಗೆ 4 ಗಂಟೆ ಸುಮಾರಿಗೆ ಫೆಂಗಲ್ ಚಂಡಮಾರುತ ಉತ್ತರ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯನ್ನು ದಾಟಿದ್ದು, ಇದರ ಪ್ರಭಾವದಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಸ್ಥಳೀಯ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಿರ್ಮಾಣವಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವ ಕೇವಲ ತಮಿಳುನಾಡು, ಪುದುಚೇರಿ ಮಾತ್ರವಲ್ಲದೆ ಕರ್ನಾಟಕದ ಮೇಲೂ ಉಂಟಾಗಿದೆ. ಇದರಿಂದಾಗಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದ ಬಿಟ್ಟೂ ಬಿಡದಂತೆ ವರುಣಾರ್ಭಟ ಜೋರಾಗಿದೆ.
ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:
ಫೆಂಗಲ್ ಚಂಡಮಾರುತ ಪ್ರಭಾವದಿಂದ ದಕ್ಷಿಣ ಕರ್ನಾಟಕದ ಒಳನಾಡು ಪ್ರದೇಶಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆ ಇದ್ದು, ಇಲ್ಲೆಲ್ಲಾ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ- Rain Alert: ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ!!
ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ:
ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಜಿಲ್ಲಾಡಳಿತದಿಂದ ಸೋಮವಾರ (ಡಿಸೆಂಬರ್ 02) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರ ಮಲೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಮವಾರ (ಡಿ.2) ಒಂದು ದಿನದ ಮಟ್ಟಿಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ ರಜಾ ದಿನಗಳಲ್ಲಿ ಇದನ್ನು ಸರಿದೂಗಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಫೆಂಗಲ್ ಚಂಡಮಾರುತ ಚೆನ್ನೈ ನಗರಕ್ಕೆ ಅಪ್ಪಳಿಸಿದ್ದು, ಇದರ ಪರಿಣಾಮ ಕೋಲಾರದ ಮೇಲೂ ಬೀರಿದೆ. ಇದರಿಂದಾಗಿ ಮುಂದಿನ ಎರಡು ದಿನ ಭಾರೀ ಮಳೆ ಇರುವುದರಿಂದ ಚಳಿಯೂ ಹೆಚ್ಚಾಗಲಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ (ಡಿ.2) ಕೋಲಾರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ ಯಾವುದಾದರೂ ರಜಾ ದಿನದಲ್ಲಿ ಪರ್ಯಾಯ ತರಗತಿಗಳನ್ನು ನಡೆಸುವ ಮೂಲಕಾಯಿಯಿ ರಜೆಯನ್ನು ಸರಿದೂಗಿಸಲಾಗುವುದು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಇದನ್ನೂ ಓದಿ- ಮುಂಜಾಗ್ರತೆ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ರಾಜ್ಯಾದ್ಯಂತ ತಡೆಹಿಡಿಯಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿ ಡಿಸಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ. ಇಂದು ಸರ್ಕಾರಿ, ಖಾಸಗಿ ಅನುದಾನಿತ,ಅಂಗನಾವಾಡಿ,ಶಾಲಾ ಕಾಲೇಜಿಗೆ ಒಂದರಿಂದ ಪದವಿ ಪೂರ್ವ ತರಗತಿವರೆಗೆ ರಜೆ ಘೊಷಣೆ ಮಾಡಿದ್ದರೆ.
ಚಾಮರಾಜನಗರ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ:
ಫೆಂಗಲ್ ಸೈಕ್ಲೋನ್ ಹಿನ್ನೆಲೆ ಚಾಮರಾಜನಗರ ಜಿಲ್ಲಾದ್ಯಂತ ರಜೆ ಘೋಷಣೆ ಮಾಡಲಾಗಿದೆ. ಪರೀಕ್ಷೆ ನಡೀತಿರುವ ಪದವಿ ಕಾಲೇಜುಗಳಿಗೆ ಹೊರತುಪಡಿಸಿ ಉಳಿದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಮಾಡಿದ್ದರೆ. ಇಂದಿನ ರಜೆ ಭಾನುವಾರ ತರಗತಿ ನಡೆಸಿ ಸರಿದೂಗಿಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.